2026-03-07 05:15:26

Kerala to be renamed Keralam | ಕೇರಳ ಇನ್ನು ಮುಂದೆ ಕೇರಳಂ ಕೇಂದ್ರ ಸಚಿವ ಸಂಪುಟ ಅನುಮೋದನೆ | Speed News Kannada

Kerala to be renamed Keralam | ಕೇರಳ ಇನ್ನು ಮುಂದೆ ಕೇರಳಂ ಕೇಂದ್ರ ಸಚಿವ ಸಂಪುಟ ಅನುಮೋದನೆ | Speed News Kannada

ನವದೆಹಲಿ: ಕೇರಳ ಇನ್ನು ಮುಂದೆ ‘ಕೇರಳಂ’ಆಗಲಿದೆ. ಕೇರಳ ರಾಜ್ಯ ಸರ್ಕಾರದ ಮನವಿಯಂತೆ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿದು ಬಂದಿದೆ.
ಈ ವರ್ಷದ ಏಪ್ರಿಲ್–ಮೇ ತಿಂಗಳಲ್ಲಿ ಕೇರಳ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ಕೇಂದ್ರ ಸರಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
2023ರ ಆಗಸ್ಟ್‌ನಲ್ಲಿ ರಾಜ್ಯದ ಹೆಸರನ್ನು ’ಕೇರಳಂ’ ಎಂದು ಬದಲಾಯಿಸಬೇಕು ಎಂದು ಒತ್ತಾಯಿಸಿ, ಕೇರಳ ವಿಧಾನಸಭೆಯಲ್ಲಿ ಬಹುಮತದ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿತ್ತು. ಕೇಂದ್ರ ಗೃಹ ಸಚಿವಾಲಯವು ಕೆಲವು ತಾಂತ್ರಿಕ ಬದಲಾವಣೆಗಳನ್ನು ಸೂಚಿಸಿದ್ದ ಕಾರಣ, 2024ರ ಜುಲೈ 24ರಂದು ಎರಡನೇ ಬಾರಿ ನಿರ್ಣಯವನ್ನು ಮಡಿ ಕಳುಹಿಸಿತ್ತು.
ಪ್ರಧಾನ ಮಂತ್ರಿ ಕಾರ್ಯಾಲಯದ ಹೊಸ ಕಟ್ಟಡ ಸೇವಾತೀರ್ಥದಲ್ಲಿ ಇಂದು ನಡೆದ ಮೊದಲ ಸಂಪುಟ ಸಭೆಯಲ್ಲಿ ಕೇರಳದ ಮನವಿಯಂತೆ ಹೆಸರನ್ನು ಬದಲಾವಣೆ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯವನ್ನು ಮಲಯಾಳ ಭಾಷೆಯಲ್ಲಿ ‘ಕೇರಳಂ’ ಎಂದು ಕರೆಯಲಾಗುತ್ತದೆ. ಆದರೆ, ಸಂವಿಧಾನದಲ್ಲಿ ಕೇರಳ ಎಂದು ಹೆಸರಿಸಲಾಗಿದೆ. ಸಂವಿಧಾನದ ಎಂಟನೇ ಪರಿಚ್ಛೇದ ಸೇರಿದಂತೆ ಎಲ್ಲಾ ಕಡೆಗಳಲ್ಲೂ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಬೇಕು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇಂದ್ರಕ್ಕೆ ಮನವಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.