ಬೆಂಗಳೂರು: ಆಹಾರ ಮತ್ತು ನಾಗರೀಕ ಪೂರೈಕೆ ಖಾತೆಯನ್ನೇ ಮರು ಹಂಚಿಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಸಚಿವ ಕೆ ಎಚ್ ಮುನಿಯಪ್ಪ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ರಾಹುಲ್ ಗಾಂಧಿ ಅವರ ಜತೆ ಚರ್ಚಿಸಿದ ನಂತರ ಮುನಿಯಪ್ಪ ಅವರು, ಐ ಆ್ಯಮ್ ಹ್ಯಾಪಿ ಎಂದಿದ್ದಾರೆ.
ರಾಜ್ಯಸಭೆಗೆ ಮಲ್ಲಿಕಾರ್ಜು ಖರ್ಗೆ ಅವರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಹಾಜರಿರಲು ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದರು. ಈ ಸಂದರ್ಭದಲಿ ಮುನಿಯಪ್ಪ ಅವರು, ಮುನಿಯಪ್ಪ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಅಳಲು ತೋಡಿಸಿಕೊಂಡಿದ್ದಾರೆ. ಆಗ ರಾಹುಲ್ ಗಾಂಧಿ ಅವರು ಗೊಂದಲ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಸಚಿವ ಮುನಿಯಪ್ಪ ಸಹ ಸಮಾಧಾನಗೊಂಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮುನಿಯಪ್ಪ ಅವರು, ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿದ್ದೇನೆ. ರಾಹುಲ್ ಗಾಂಧಿ ಗೊಂದಲ ಸರಿಪಡಿಸುವುದಾಗಿ ಹೇಳಿದ್ದಾರೆ. ಹೀಗಾಗಿ ಐ ಆ್ಯಮ್ ಹ್ಯಾಪಿ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಅವರು ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ಸಿದ್ದರಾಮಯ್ಯ ಅವರ ಸಂಪುಟದಲ್ಲೂ ಮುನಿಯಪ್ಪ ಅವರಿಗೆ ಆಹಾರ ಇಲಾಖೆ ಖಾತೆ ನೀಡಲಾಗಿತ್ತು. ಇದೀಗ ಡಿಕೆ ಶಿವಕುಮಾರ್ ಸಂಪುಟದಲ್ಲೂ ಅದೇ ಖಾತೆ ನೀಡಲಾಗಿದೆ. ಇದರಿಂದ ಅಸಮಾಧಾನಗೊಂಡಿದ್ದ ಮುನಿಯಪ್ಪ, ಇಂದು ಬೆಳಗ್ಗೆ ಮಾಧ್ಯಮಗಳ ಮುಂದೆಯೇ ಬಹಿರಂಗವಾಗಿ ಬೇಸರ ಹೊರಹಾಕಿದ್ದರು. ಸಮಾಜ ಕಲ್ಯಾಣ ಇಲಾಖೆ ಬೇಕು ಎಂದು ಪಟ್ಟು ಹಿಡಿದಿದ್ದರು.