2026-06-08 01:33:16

ಮುಗಿಯದ ಖಾತೆ ಕ್ಯಾತೆ; ಖಾತೆ ಹಂಚಿಕೆಗೆ ಕೆ ಎಚ್‌ ಮುನಿಯಪ್ಪ ಬೇಸರ|Speed News Kannada

ಮುಗಿಯದ ಖಾತೆ ಕ್ಯಾತೆ; ಖಾತೆ ಹಂಚಿಕೆಗೆ ಕೆ ಎಚ್‌ ಮುನಿಯಪ್ಪ ಬೇಸರ|Speed News Kannada

ಬೆಂಗಳೂರು: ರಾಮಲಿಂಗಾರೆಡ್ಡಿ ರಾಜೀನಾಮೆ ಬೆನ್ನಲ್ಲೇ ಮತ್ತೊಬ್ಬ ಸಚಿವ ಕೆ ಎಚ್‌ ಮುನಿಯಪ್ಪ ಅವರೂ ಖಾತೆ ಕುರಿತು ಕ್ಯಾತೆ ತೆಗೆದಿದ್ದಾರೆ. ತಮ್ಮಂತಹ ಹಿರಿಯ ಅನುಭವಿ ಸಚಿವರಿಗೆ ಮತ್ತೆ ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಹಂಚಿಕೆ ಮಾಡಿರುವುದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಮ್ಮ ಕ್ಷೇತ್ರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆಎಚ್ ಮುನಿಯಪ್ಪ ಅವರು, ಖಾತೆ ಕೊಡುವಾಗ ಹಿರಿತನವನ್ನು ಪರಿಗಣಿಸಿಲ್ಲ. ನನ್ನ ಖಾತೆಯನ್ನ ಬದಲಾವಣೆ ಮಾಡಬೇಕು. ಸಮಾಜ ಕಲ್ಯಾಣ ಅಥವಾ ಕೃಷಿ ಖಾತೆ ಕೊಡಿ ಕೊಡುವಂತೆ ಬೇಡಿಕೆ ಇರಿಸಿದ್ದೆ. ಮೂರು ವರ್ಷಗಳಿಂದ ಆಹಾರ ಇಲಾಖೆ ನಿಭಾಯಿಸಿದ್ದೇನೆ. ಒಬ್ಬೊರಿಗೆ ಒಂದೊಂದು ರೀತಿ ಮಾಡಬೇಡಿ. ನನ್ನ ಖಾತೆ ಬದಲಿಸಿ ಎಂದು ಹೈಕಮಾಂಡ್‌ ಗೆ ಮತ್ತೊಮ್ಮೆ ಮನವಿ ಮಾಡಿಕೊಳ್ಳುವುದಾಗಿ ಹೇಳಿದರು.

ನಾನು ಇತ್ತೀಚೆಗಷ್ಟೇ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಈ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದೇನೆ. ಎಲ್ಲರನ್ನೂ ಒಂದೇ ರೀತಿಯಲ್ಲಿ ನಡೆಸಿಕೊಳ್ಳಬೇಕು ಎಂದು ಕೇಳಿಕೊಂಡಿದ್ದೇನೆ. ನನ್ನ ಖಾತೆಯನ್ನು ಶೀಘ್ರದಲ್ಲೇ ಬದಲಾವಣೆ ಮಾಡಿಕೊಡಲಿದ್ದಾರೆ ಎಂಬ ನಂಬಿಕೆ ನನಗಿದೆ ಎಂದು ಮುನಿಯಪ್ಪ ಹೇಳಿದ್ದಾರೆ.

ನಾನು 8 ಬಾರಿ ಗೆದ್ದಿರುವ ಹಿರಿಯ ರಾಜಕಾರಣಿ. ಆದರೆ ಖಾತೆ ಹಂಚಿಕೆಯಲ್ಲಿ ನಮ್ಮ ಹಿರಿತನವನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲ ನಾಯಕರನ್ನೂ ಒಂದೇ ಕಣ್ಣಿನಿಂದ ನೋಡಬೇಕು. ಈ ರೀತಿಯ ಗೊಂದಲಗಳು ಪಕ್ಷಕ್ಕೆ ಒಳ್ಳೆಯದಲ್ಲ, ಇಲಾಖೆಗಳ ಹಂಚಿಕೆ ಸರಿಹೋಗದಿದ್ದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗುವ ಆತಂಕವಿದೆ ಎಂದು ಮುನಿಯಪ್ಪ ಎಚ್ಚರಿಸಿದ್ದಾರೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.