2026-03-07 05:05:27

Khameneis son Mojtaba Khamenei elected supreme leader | ಇರಾನ್‌ ಖಮೇನಿ ಪುತ್ರ ಮೊಜತಬಾ ಖಮೇನಿ ಪರಮೋಚ್ಚ ನಾಯಕನಾಗಿ ಆಯ್ಕೆ | Speed News Kannada

Khameneis son Mojtaba Khamenei elected supreme leader | ಇರಾನ್‌ ಖಮೇನಿ ಪುತ್ರ ಮೊಜತಬಾ ಖಮೇನಿ ಪರಮೋಚ್ಚ ನಾಯಕನಾಗಿ ಆಯ್ಕೆ | Speed News Kannada

ಟೆಹರಾನ್:ಇರಾನ್‌ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಹತ್ಯೆ ನಂತರ ಅವರ ಉತ್ತರಾಧಿಕಾರಿಯಾಗಿ ಅವರ ಪುತ್ರ ಮೊಜತಬಾ ಖಮೇನಿ ಆಯ್ಕೆಯಾಗಿದ್ದಾರೆ. 
ದೇಶದ ಅಸೆಂಬ್ಲಿಯ ತಜ್ಞರ ಮಂಡಳಿಯಿಂದ ಇರಾನ್‌ ಪರಮೋಚ್ಚ ನಾಯಕರಾಗಿ ಖಮೇನಿ ಅವರ ಪುತ್ರ 56 ವರ್ಷದ ಮೊಜತಬಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
ಮೊಜತಬಾ ಅವರು ಇರಾನ್‌ನ ರೆವಲ್ಯೂಷನರಿ ಗಾರ್ಡ್‌ ನೊಂದಿಗೆ ನಿಕಟ ಬಾಂಧವ್ಯವನ್ನು ಹೊಂದಿದ್ದಾರೆ. ಈ ಬಿಕ್ಕಟ್ಟಿನ ಸಮಯದಲ್ಲಿ ದೇಶವನ್ನು ಮುನ್ನಡೆಸಲು, ದೇಶದ ಭದ್ರತೆ ಹಾಗೂ ಮಿಲಿಟರಿಯ ನಿರ್ವಹಣೆ ಮಾಡಲು ಮೊಜತಬಾ ಅವರಿಂದ ಮಾತ್ರ ಸಾಧ್ಯ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಮೊಜತಬಾ ಅವರು ಅತ್ಯುನ್ನತ ಧಾರ್ಮಿಕ ಶಿಕ್ಷಣ ಪಡೆದಿದ್ದು, ಕ್ರಾಂತಿಕಾರಿ ಗಾರ್ಡ್‌ನಲ್ಲಿ ಸೇವೆ ಸಲ್ಲಿಸಿದ್ದರು ಮತ್ತು ತಂದೆಯ ವಿಶ್ವಾಸಾರ್ಹ ಸಲಹೆಗಾರರಾಗಿದ್ದರು. ಈ ನೇಮಕವು ಇರಾನ್‌ನ ರಾಜಕೀಯ ಭವಿಷ್ಯ ಮತ್ತು ಪ್ರಾದೇಶಿಕ ಸ್ಥಿರತೆಯ ಮೇಲೆ ಹೇಗೆ ಪರಿಣಾಮ ಬೀರಲಿದೆ ಎಂಬುದು ಕುತೂಹಲಕಾರಿಯಾಗಿದೆ.
ಇರಾನ್‌ ನಲ್ಲಿ ಈ ಹುದ್ದೆಗೆ ಗರಿಷ್ಠಪ್ರಮಾಣದ ಅಧಿಕಾರವಿದೆ. ಈ ಹುದ್ದೆಯನ್ನು ಹೊಂದಿರುವ ವ್ಯಕ್ತಿ ಸಶಸ್ತ್ರ ಪಡೆಗಳ ಕಮಾಂಡರ್-ಇನ್-ಚೀಫ್ ಮತ್ತು ದೇಶದ ಪ್ರಮುಖ ರಾಜಕೀಯ, ಮಿಲಿಟರಿ ಮತ್ತು ಕಾರ್ಯತಂತ್ರದ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರ ಹೊಂದಿರುತ್ತಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.