2026-04-23 09:22:07

Kiccha Sudeep as Kaala Bhairava | KD ಚಿತ್ರದಲ್ಲಿ ಕಾಲ ಭೈರವನಾದ ಕಿಚ್ಚ ಸುದೀಪ್ | Speed news kannada

Kiccha Sudeep as Kaala Bhairava | KD ಚಿತ್ರದಲ್ಲಿ ಕಾಲ ಭೈರವನಾದ ಕಿಚ್ಚ ಸುದೀಪ್ | Speed news kannada

ವಿವಿಧ ಕಾರಣಗಳಿಗಾಗಿ, ವಿಶೇಷವಾಗಿ ಅದರ ವಿವಾದಾತ್ಮಕ ಹಾಡಿನಿಂದ ಸಂಚಲನ ಸೃಷ್ಟಿಸುತ್ತಿರುವ ಕೆಡಿ ಚಿತ್ರ ಇದೀಗ ಮತ್ತೆ ಗಮನ ಸೆಳೆದಿದೆ. ಚಿತ್ರದ ನಿರ್ದೇಶಕ ಜೋಗಿ ಪ್ರೇಮ್ ಹೊಸ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಧ್ರುವ ಸರ್ಜಾ ನಾಯಕನಾಗಿ ಅಭಿನಯಿಸಿರುವ KD ಚಿತ್ರದಲ್ಲಿ ಕಿಚ್ಚ ಸುದೀಪ್ ನಟಿಸುತ್ತಿದ್ದಾರೆ ಎಂಬ ಸುದ್ದಿ ಈಗ ಅಧಿಕೃತವಾಗಿ ದೃಢಪಟ್ಟಿದೆ.

ಚಿತ್ರದಲ್ಲಿ ಸುದೀಪ್ 'ಕಾಲ ಭೈರವ'ನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಸ್ವತಃ ಪ್ರೇಮ್‌ ಮಾಹಿತಿ ಹಂಚಿಕೊಂಡಿದ್ದು, ಚಿತ್ರದಲ್ಲಿ ವಿ ರವಿಚಂದ್ರನ್, ರಮೇಶ್ ಅರವಿಂದ್, ಸಂಜಯ್ ದತ್, ಶಿಲ್ಪಾ ಶೆಟ್ಟಿ ಮತ್ತು ಪಿ ರವಿಶಂಕರ್ ಮುಂತಾದವರು ನಟಿಸಿದ್ದಾರೆ. ನೋರಾ ಫತೇಹಿ ವಿಶೇಷ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ತಿಳಿಸಿದ್ಧಾರೆ.

ಕಿಚ್ಚಸುದೀಪ್‌ ಪಾತ್ರದ ಕಾಲ ಭೈರವ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಲಾಗಿದ್ದು, ಕೆಲವು ಹೆಸರುಗಳು ಭಯವನ್ನು ಉಂಟುಮಾಡಿದರೆ, ಇದು ಅವ್ಯವಸ್ಥೆಯನ್ನು ಸೃಷ್ಟಿಸುತ್ತದೆ. ಆ ಹೆಸರೇ ಕಾಲ ಭೈರವ ಎಂದು ನಿರ್ದೇಶಕ ಪ್ರೇಮ್ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. 

 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.