2026-04-23 09:34:28

King Kohli world record shattered | ಕಿಂಗ್ ಕೊಹ್ಲಿ ಆರ್ಭಟಕ್ಕೆ ವಿಶ್ವ ದಾಖಲೆಯೇ ಧೂಳೀಪಟ | Speed news kannada

King Kohli world record shattered | ಕಿಂಗ್ ಕೊಹ್ಲಿ ಆರ್ಭಟಕ್ಕೆ ವಿಶ್ವ ದಾಖಲೆಯೇ ಧೂಳೀಪಟ | Speed news kannada

ಇಂಡಿಯನ್‌ ಪ್ರಿಮಿಯರ್‌ ಲೀಗ್‌ 19ನೇ ಆವೃತ್ತಿಯ 23ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ ಕೇವಲ 146 ರನ್​ ಗಳಿಸಿತ್ತು. ಈ ಗುರಿಯನ್ನು ಬೆನ್ನಟ್ಟಿದ್ದ ಆರ್​ಸಿಬಿ ತಂಡ 15.1 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಮತ್ತೊಂದು ವಿಶ್ವ ದಾಖಲೆಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಒಂದೇ ಮೈದಾನದಲ್ಲಿ ಹೆಚ್ಚು ರನ್‌ ಗಳಿಸಿದ ಹೆಗ್ಗಳಿಕೆಗೆ ವಿರಾಟ್‌ ಕೊಹ್ಲಿ ಪಾತ್ರರಾಗಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅತೀ ಹೆಚ್ಚು ರನ್​ ಕಲೆಹಾಕಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 34 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 49 ರನ್​ ಬಾರಿಸಿದ್ದರು. ಈ 49 ರನ್​ಗಳೊಂದಿಗೆ ಕಿಂಗ್ ಕೊಹ್ಲಿ ಟಿ20 ಇತಿಹಾಸದಲ್ಲೇ ಒಂದೇ ಮೈದಾನದಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈವರೆಗೆ 109 ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಕೊಹ್ಲಿ ಬರೋಬ್ಬರಿ 3750+ ರನ್​ ಗಳಿಸಿದ್ದಾರೆ. ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಮೈದಾನದಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.