ಇಂಡಿಯನ್ ಪ್ರಿಮಿಯರ್ ಲೀಗ್ 19ನೇ ಆವೃತ್ತಿಯ 23ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ ಕೇವಲ 146 ರನ್ ಗಳಿಸಿತ್ತು. ಈ ಗುರಿಯನ್ನು ಬೆನ್ನಟ್ಟಿದ್ದ ಆರ್ಸಿಬಿ ತಂಡ 15.1 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಮತ್ತೊಂದು ವಿಶ್ವ ದಾಖಲೆಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಒಂದೇ ಮೈದಾನದಲ್ಲಿ ಹೆಚ್ಚು ರನ್ ಗಳಿಸಿದ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 34 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 49 ರನ್ ಬಾರಿಸಿದ್ದರು. ಈ 49 ರನ್ಗಳೊಂದಿಗೆ ಕಿಂಗ್ ಕೊಹ್ಲಿ ಟಿ20 ಇತಿಹಾಸದಲ್ಲೇ ಒಂದೇ ಮೈದಾನದಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈವರೆಗೆ 109 ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಕೊಹ್ಲಿ ಬರೋಬ್ಬರಿ 3750+ ರನ್ ಗಳಿಸಿದ್ದಾರೆ. ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಮೈದಾನದಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.