2026-07-23 08:41:06

KL Rahul scores record 6th century in IPL | ಐಪಿಎಲ್‌ನಲ್ಲಿ ದಾಖಲೆಯ 6ನೇ ಶತಕ ಸಿಡಿಸಿದ ಕೆಎಲ್‌ ರಾಹುಲ್‌ | Speed news kannada

KL Rahul scores record 6th century in IPL | ಐಪಿಎಲ್‌ನಲ್ಲಿ ದಾಖಲೆಯ 6ನೇ ಶತಕ ಸಿಡಿಸಿದ ಕೆಎಲ್‌ ರಾಹುಲ್‌ | Speed news kannada

2026ರ ಐಪಿಎಲ್‌ನಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ (DC vs PBKS) ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಕನ್ನಡಿಗ ಕೆಎಲ್ ರಾಹುಲ್ (KL Rahul) ಭರ್ಜರಿ ಶತಕ ಸಿಡಿಸಿದರು. ಬ್ಯಾಟಿಂಗ್‌ ಸ್ನೇಹಿ ಪಿಚ್​ನಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಹರಿಸಿದ ರಾಹುಲ್ ಕೇವಲ 47 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದರು. ಯಾನ್ಸನ್ ಎಸೆದ 15ನೇ ಓವರ್​ನ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ರಾಹುಲ್ ತಮ್ಮ ಐಪಿಎಲ್ ವೃತ್ತಿಜೀವನದ 6ನೇ ಶತಕ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪರ ಎರಡನೇ ಶತಕವನ್ನು ದಾಖಲಿಸಿದರು.

ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ ಡೆಲ್ಲಿ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಪಾತುಮ್ ನಿಸ್ಸಾಂಕ ಮತ್ತೆ ನಿರಾಸೆ ಮೂಡಿಸಿದರು. ಇದರ ಜೊತೆಗೆ ರಾಹುಲ್ ಕೂಡ 12 ರನ್​ಗಳಿಗೆ ಸುಲಭ ಕ್ಯಾಚ್ ನೀಡಿದ್ದರು. ಆದರೆ ಪಂಜಾಬ್ ಕಿಂಗ್ಸ್‌ ತಂಡದ ಶಶಾಂಕ್ ಸಿಂಗ್ ಸುಲಭ ಕ್ಯಾಚ್ ಅನ್ನು ಕೈಚೆಲ್ಲುವ ಮೂಲಕ ರಾಹುಲ್ ಶತಕಕ್ಕೆ ನೆರವಾದರು. ಇದರ ಜೊತೆಗೆ ರಾಹುಲ್​ಗೆ ಎರಡನೇ ಜೀವದಾನವೂ ಸಿಕ್ಕಿತು. ಇದರ ಸಂಪೂರ್ಣ ಲಾಭವನ್ನು ಬಳಸಿಕೊಳ್ಳುವಲ್ಲಿ ರಾಹುಲ್ ಯಶಸ್ವಿಯಾದರು. ಈ ಶತಕದೊಂದಿಗೆ, ಕೆಎಲ್ ರಾಹುಲ್ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ಈ ಆವೃತ್ತಿಯ ಆರಂಭದಲ್ಲಿ ರಾಹುಲ್ ಎರಡು ಪಂದ್ಯಗಳಲ್ಲಿ ಕೇವಲ 1 ರನ್ ಗಳಿಸಿ ಕಳಪೆ ಪ್ರದರ್ಶನ ನೀಡಿದ್ದರು ಎಂಬುದು ಗಮನಿಸಬೇಕಾದ ಸಂಗತಿ. ಆ ನಂತರ 92 ರನ್‌ಗಳ ಇನ್ನಿಂಗ್ಸ್‌ ಆಡುವ ಮೂಲಕ ಫಾರ್ಮ್​ ಕಂಡುಕೊಂಡಿದ್ದ ರಾಹುಲ್ ಈಗ ರನ್ ಸ್ಕೋರಿಂಗ್ ಪಟ್ಟಿಯಲ್ಲಿ ನಂ. 1 ಸ್ಥಾನಕ್ಕೇರಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.