2026-06-08 02:41:25

KRS collapses in the scorching summer sun | ಬಿರು ಬೇಸಿಗೆ ಬಿಸಿಲಿಗೆ ಕುಸಿದ ಕೆಆರ್‌ಎಸ್‌ | Speed news kannada

KRS collapses in the scorching summer sun | ಬಿರು ಬೇಸಿಗೆ ಬಿಸಿಲಿಗೆ ಕುಸಿದ ಕೆಆರ್‌ಎಸ್‌ | Speed news kannada

ಬೇಸಿಗೆ ಆರಂಭದಲ್ಲೇ ಕೆಆರ್‌ಎಸ್ (KRS) ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯದಲ್ಲಿ ಬೇಸಿಗೆ ಆರಂಭದಲ್ಲೇ ನೀರಿನ ಮಟ್ಟ ಇಳಿಕೆ ಕಂಡಿದೆ. ಬೇಸಿಗೆಯ ಆರಂಭದಲ್ಲೇ ನೀರಿನ ಸಮಸ್ಯೆಯಿಂದ ಜನರು ಒದ್ದಾಡುತ್ತಿದ್ದು, ಇದೀಗ ನೀರಿನ ಮಟ್ಟ ಕುಸಿತದಿಂದ ಜನರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ಒಂದು ವೇಳೆ ಮುಂಗಾರು ತಡವಾದ್ರೆ ಬೆಂಗಳೂರು ಮಾತ್ರವಲ್ಲದೇ ಕಾವೇರಿ ನೀರು ಅವಲಂಬಿಸಿರುವ ಜನರಿಗೆ ನೀರಿನ ಸಮಸ್ಯೆ ಎದುರಾಗುವ ಭೀತಿಯಿದೆ̤ ಈ ವರ್ಷ ಕೆಆರ್‌ಎಸ್ ಅಣೆಕಟ್ಟೆ ಅವಧಿಗೂ ಮುನ್ನವೇ ಭರ್ತಿಯಾಗುವ ಮೂಲಕ ದಾಖಲೆ ಬರೆದಿತ್ತು. ಇದೀಗ 124.80 ಗರಿಷ್ಠ ಮಟ್ಟ ಸಂಗ್ರಹ ಸಾಮರ್ಥ್ಯದಲ್ಲಿ ನೀರಿನ ಮಟ್ಟ 99 ಅಡಿಗೆ ತಲುಪಿದೆ. ಒಳಹರಿವು 66 ಕ್ಯೂಸೆಕ್ ಇದ್ದು, 4,033 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಅಣೆಕಟ್ಟೆಯಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದರೂ ಕೂಡ ಪ್ರಸ್ತುತ ಬೆಳೆದು ನಿಂತಿರುವ ಬೆಳೆಗಳಿಗೆ ಕಟ್ಟು ಪದ್ದತಿಯಂತೆ ನೀರು ನೀಡಲಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಕಾವೇರಿ ನದಿ ನೀರನ್ನು ಕುಡಿಯಲು ಅವಲಂಬಿಸಿರುವ ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ಜಿಲ್ಲೆಯ ಜನರಿಗೆ ಮುಂಗಾರುವರೆಗೂ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಡ್ಯಾಂನಲ್ಲಿ 60 ಅಡಿ ಬರುವವರೆಗೂ ನೀರು ಬಳಸಲು ಸಾಧ್ಯವಿದೆ. ಅಂದರೆ ಇನ್ನೂ 15 ಟಿಎಂಸಿ ನೀರು ಬಳಸಲು ಲಭ್ಯವಿದೆ. 2003ರಲ್ಲಿ ಕೆ.ಆರ್.ಸಾಗರ ಅಣೆಕಟ್ಟೆಯಲ್ಲಿ ಏಪ್ರಿಲ್ ತಿಂಗಳಲ್ಲಿ ನೀರಿನ ಮಟ್ಟ 65.90 ಅಡಿ ತಲುಪಿದ್ದು ಈವರೆಗಿನ ಕನಿಷ್ಟ ಮಟ್ಟದ ದಾಖಲೆಯಾಗಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.