2026-07-23 11:22:51

KSRTC bus collides with private bus in Tumku|ತುಮಕೂರಿನಲ್ಲಿ ಖಾಸಗಿ ಬಸ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ|Speed News Kannada

KSRTC bus collides with private bus in Tumku|ತುಮಕೂರಿನಲ್ಲಿ ಖಾಸಗಿ ಬಸ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ|Speed News Kannada

ಶಿರಾ ಹೊರವಲಯದ ನ್ಯಾಷನಲ್ ಹೈವೇ 48 ರಸ್ತೆಯಲ್ಲಿ ನಿಂತಿದ್ದ ಖಾಸಗಿ ಬಸ್‌ಗೆ ಹಿಂದಿನಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಭೀಕರ ಡಿಕ್ಕಿ ಹೊಡೆದು 2 ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ಪೊಲೀಸರು ಇಬ್ಬರನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಾಥಮಿಕ ತನಿಖೆಗಾಗಿ, ಅಪಘಾತಕ್ಕೆ ಖಾಸಗಿ ಬಸ್ ಚಾಲಕ ಯಾವುದೇ ರಿಫ್ಲೆಕ್ಟರ್ ಇಲ್ಲದೆ ರಸ್ತೆ ಬದಿಯಲ್ಲಿ ಬಸ್ ನಿಲ್ಲಿಸಿದ್ದ ಕಾರಣ ಎಂದು ತಿಳಿದುಬಂದಿದೆ. ರಸ್ತೆ ಸುರಕ್ಷತೆ ಪಾಲಿಸುವ ಮಹತ್ವವನ್ನು ಪೊಲೀಸರು ಒತ್ತಿ ಎಚ್ಚರಿಸಿದ್ದಾರೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.