2026-06-25 02:04:43

KSRTC bus, private Bus Accident | ಕೆಎಸ್‌ಆರ್‌ಟಿಸಿ ಬಸ್‌ ಖಾಸಗಿ ಬಸ್‌ ಡಿಕ್ಕಿ 20ಕ್ಕೂ ಹೆಚ್ಚು ಮಂದಿಗೆ ಗಾಯ | Speed News Kannada

KSRTC bus, private Bus Accident | ಕೆಎಸ್‌ಆರ್‌ಟಿಸಿ ಬಸ್‌ ಖಾಸಗಿ ಬಸ್‌ ಡಿಕ್ಕಿ 20ಕ್ಕೂ ಹೆಚ್ಚು ಮಂದಿಗೆ ಗಾಯ | Speed News Kannada

ಚಾಮರಾಜನಗರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ 4ನೇ ತಿರುವಿನಲ್ಲಿ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್‌ವು ಮೈಸೂರುದಿಂದ ಮಲೆ ಮಹದೇಶ್ವರ ಬೆಟ್ಟದತ್ತ ತೆರಳುತ್ತಿದ್ದ ವೇಳೆ, ಎದುರಿನಿಂದ ಬಂದ ಖಾಸಗಿ ಬಸ್‌ನೊಂದಿಗೆ ಬೆಟ್ಟದ ತಿರುವಿನಲ್ಲಿ ಪರಸ್ಪರ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ.
ಅಪಘಾತದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಸ್ಥಳೀಯರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಗಂಭೀರವಾಗಿರುವುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸುವ ಸಾಧ್ಯತೆ ಇದೆ.
ರೀಲ್ಸ್ ನೋಡುತ್ತಾ ಬಸ್ ಓಡಿಸಿದ ಚಾಲಕ ಸೋಷಿಯಲ್‌ ಮೀಡಿಯಾ  ರೀಲ್ಸ್ ಗಳನ್ನು ಮಾಡೋರ ಹಾಗೂ ನೋಡುವವರ ಸಂಖ್ಯೆ ಹೆಚ್ಚುತ್ತಿದ್ದು, KSRTC ಡ್ರೈವರ್ಒ ಗಾಡಿ ಓಡಿಸುವಾಗಲೇ ರೀಲ್ಸ್ ನೋಡುತ್ತಾ ಹುಚ್ಚಾಟ ಮೆರೆದಿದ್ದಾನೆ.
ಮಳವಳ್ಳಿಯಿಂದ ಮೈಸೂರಿಗೆ ತೆರಳುತ್ತಿದ್ದ KSRTC ಬಸ್ ಚಾಲಕನೊಬ್ಬರು ಬಸ್ ಓಡಿಸುವಾಗಲೇ ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತಿದ್ದ ಭೀಕರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬೇಜವಾಬ್ದಾರಿಯಿಂದ ಡ್ರೈವಿಂಗ್ ಮಾಡುತ್ತಿದ್ದ ಚಾಲಕನ ವಿರುದ್ಧ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.KSRTC ಬಸ್‌ನ ಚಾಲಕ ಮಹೇಶ್ ಎಂಬುವರು ಸ್ಟೇರಿಂಗ್ ಬಳಿ ಮೊಬೈಲ್ ಇಟ್ಟುಕೊಂಡು ರೀಲ್ಸ್ ನೋಡುತ್ತಾ ಬಸ್ ಓಡಿಸುತ್ತಿರೋ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಬಸ್ ಸುಮಾರು 70-80 ಕಿ.ಮೀ. ವೇಗದಲ್ಲಿ ಚಲಿಸುತ್ತಿದ್ದ ಮಹೇಶ್ ಆ ಸಮಯದಲ್ಲಿ ಚಾಲಕನ ಗಮನ ಸಂಪೂರ್ಣವಾಗಿ ಮೊಬೈಲ್ ಮೇಲೆ ಇತ್ತು ಎಂದು ವಿಡಿಯೋ ನಿಖರವಾಗಿ ತೋರಿಸುತ್ತದೆ. ಚಾಲಕನ ಇಂತಹ ನಿರ್ಲಕ್ಷ್ಯದಿಂದ ಪ್ರಯಾಣಿಕರ ಜೀವಕ್ಕೆ ಗಂಭೀರ ಅಪಾಯ ಉಂಟಾಗಬಹುದು ಎಂದು ಜನರು ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸಂಬಂಧ ಪಟ್ಟ ಹಿರಿಯ ಅಧಿಕಾರಿಗಳು ತಕ್ಷಣವೇ ಡ್ರೈವ‌ರ್ ಮಹೇಶ್ ಮೇಲೆ ಕ್ರಮ ಕೈಗೊಳ್ಳುವಂತೆ ಪ್ರಯಾಣಿಕರು ಒತ್ತಾಯಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.