2026-04-23 09:17:57

Last video call to husband found dead|ಗಂಡನಿಗೆ ಕೊನೆಯ ವಿಡಿಯೋ ಕಾಲ್‌ ಶವವಾಗಿ ಪತ್ತೆ|Speed News Kannada

Last video call to husband found dead|ಗಂಡನಿಗೆ ಕೊನೆಯ ವಿಡಿಯೋ ಕಾಲ್‌ ಶವವಾಗಿ ಪತ್ತೆ|Speed News Kannada

ಸನ್ ಟಿವಿ’ಯ ಅತ್ಯಂತ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ ‘ಕಯಲ್’ ಮೂಲಕ ಮನೆಮಾತಾಗಿದ್ದ ನಟಿ ಸುಭಾಷಿಣಿ ಬಾಲಸುಬ್ರಮಣಿಯಂ ಇಂದು (ಏಪ್ರಿಲ್ 6) ಚೆನ್ನೈನಲ್ಲಿ ನಿಧನರಾಗಿದ್ದಾರೆ. ಉದಯೋನ್ಮುಖ ನಟಿಯ ಹಠಾತ್ ಸಾವು ತಮಿಳು ಕಿರುತೆರೆ ಲೋಕಕ್ಕೆ ಮತ್ತು ಅವರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ. ವರದಿಗಳ ಪ್ರಕಾರ, ಚೆನ್ನೈನ ತಮ್ಮ ನಿವಾಸದಲ್ಲಿ ಸುಭಾಷಿಣಿ ಶವವಾಗಿ ಪತ್ತೆಯಾಗಿದ್ದಾರೆ. ಪ್ರಾಥಮಿಕ ಪೊಲೀಸ್ ತನಿಖೆಯ ಪ್ರಕಾರ ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದಾಗ ನಡೆದ ವೈಯಕ್ತಿಕ ಜಗಳ ಮತ್ತು ಅದರಿಂದ ಉಂಟಾದ ಮಾನಸಿಕ ಸಂಕಟವೇ ಸುಭಾಷಿಣಿ ಅವರ ಈ ದುಡುಕಿನ ನಿರ್ಧಾರಕ್ಕೆ ಕಾರಣವಿರಬಹುದು ಎಂದು ಹೇಳಲಾಗುತ್ತಿದೆ.

 ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ನಟಿಯ ಸಾವಿನಿಂದ ತಮಿಳು ಕಿರುತೆರೆ ಲೋಕದಲ್ಲಿ ಶೋಕ ಮನೆ ಮಾಡಿದೆ. ಮೂಲತಃ ಶ್ರೀಲಂಕಾದವರಾದ ಸುಭಾಷಿಣಿ, ನಟನೆಯಲ್ಲಿ ಏನಾದರೂ ಸಾಧಿಸಬೇಕೆಂಬ ದೊಡ್ಡ ಕನಸಿನೊಂದಿಗೆ ಚೆನ್ನೈಗೆ ಬಂದಿದ್ದರು. ಆರಂಭದಲ್ಲಿ ಅನೇಕ ಆಡಿಷನ್‌ಗಳು ಮತ್ತು ಸಣ್ಣಪುಟ್ಟ ಪಾತ್ರಗಳಿಗಾಗಿ ಸಾಕಷ್ಟು ಕಷ್ಟಪಟ್ಟಿದ್ದರು. ಸತತ ಪ್ರಯತ್ನದ ಫಲವಾಗಿ ಅವರಿಗೆ ಸನ್ ಟಿವಿಯ ‘ಕಯಲ್’ ಧಾರಾವಾಹಿಯಲ್ಲಿ ನಟಿಸುವ ಅವಕಾಶ ಸಿಕ್ಕಿತು. ಕಯಲ್’ ಧಾರಾವಾಹಿಯ ಪಾತ್ರ ಸುಭಾಷಿಣಿ ಅವರಿಗೆ ದೊಡ್ಡ ಬ್ರೇಕ್ ನೀಡಿತ್ತು. ತಮ್ಮ ಗಮನಾರ್ಹ ನಟನೆಯ ಮೂಲಕ ತಮಿಳು ಕಿರುತೆರೆ ಪ್ರೇಕ್ಷಕರ ಮನೆಮನೆಯಲ್ಲೂ ಗುರುತಿಸಿಕೊಂಡಿದ್ದ ಅವರು, ಭವಿಷ್ಯದಲ್ಲಿ ಸಿನಿಮಾಗಳಲ್ಲೂ ನಟಿಸುವ ಆಶಯ ಹೊಂದಿದ್ದರು. ಅವರ ಅಭಿನಯವು ಪ್ರೇಕ್ಷಕರಿಗೆ ತುಂಬಾ ಇಷ್ಟವಾಗಿತ್ತು. ಆದರೆ ಅವರ ಜೀವನ ದುರಂತ ಅಂತ್ಯ ಕಂಡಿದೆ.

ಸುಭಾಷಿಣಿ ಬಾಲಸುಬ್ರಮಣಿಯಂ ಅವರ ನಿಧನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಮತ್ತು ಸಹನಟರು ಕಂಬನಿ ಮಿಡಿದಿದ್ದಾರೆ. ಇದೇ ವೇಳೆ, ಮನರಂಜನಾ ಕ್ಷೇತ್ರದಲ್ಲಿ ಕಲಾವಿದರು ಅನುಭವಿಸುವ ಒತ್ತಡ, ವೈಯಕ್ತಿಕ ಜೀವನದ ಸಮಸ್ಯೆಗಳು ಮತ್ತು ಮಾನಸಿಕ ಆರೋಗ್ಯದ ಕುರಿತು ಮತ್ತೊಮ್ಮೆ ಗಂಭೀರ ಚರ್ಚೆಗಳು ಆರಂಭವಾಗಿವೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.