ನವದೆಹಲಿ: ಮುಖ್ಯಮಂತ್ರಿ ಸಮಸ್ಯೆ ಮೊದಲು ಪರಿಹಾರ ಆಗಲಿ, ನಂತರ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ವಿಷಯಗಳತ್ತ ಗಮನ ಹರಿಸೋಣ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಅವರು ಇಂದು ದೆಹಲಿಯ ಕರ್ನಾಟಕ ಭನವದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಗೆ ಕರೆದಿದ್ದಾರೆ. ನಾನೂ ಉಪಹಾರ ಕೂಟದಲ್ಲಿ ಭಾಗಿಯಾಗುತ್ತೇನೆ. ಸಿಎಂ ಬದಲಾವಣೆ ಕುರಿತು ನಾಳೆ ಸ್ಷಷ್ಟನೆ ಸಿಗಲಿದೆ. ಸಿದ್ದರಾಮಯ್ಯ ಅವರು ಇದುವರೆಗೂ ಅಧಿಕೃತವಾಗಿ ಏನನ್ನೂ ಹೇಳಿಲ್ಲ. ನಾನೂ ಅವರೊಂದಿಗೆ ವೈಯಕ್ತಿಕವಾಗಿ ಮಾತನಾಡಿಲ್ಲ ಎಂದು ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯೂ ಆಗಿರುವ ಅವರು ಈ ಹುದ್ದೆ ಕುರಿತು ಇನ್ನೂ ಚರ್ಚೆ ನಡೆದಿಲ್ಲ. ನನ್ನನ್ನು ಕೇಳಿದರೆ ನನ್ನ ಅಭಿಪ್ರಾಯ ಹೇಳುತ್ತೇನೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತು ಸಚಿವ ಸ್ಥಾನ ಪಡೆಯುವ ಬಗ್ಗೆ ಚರ್ಚೆ ಮಾಡಿಲ್ಲ. ಈ ಹಿಂದೆ ಚರ್ಚೆ ನಡೆದಾಗ ನನ್ನ ಅಭಿಪ್ರಾಯ ತಿಳಿಸಿದ್ದೇನೆ ಎಂದು ಪ್ರಶನೆಯೊಂದಕ್ಕೆ ಉತ್ತರಿಸಿದರು.