2026-06-08 02:43:50

Letter to Prime Minister seeking support for Women Reservation Bill|ಮಹಿಳಾ ಮೀಸಲಾತಿ ವಿಧೇಯಕ ಬೆಂಬಲಿಸುವಂತೆ ಪ್ರಧಾನಿ ಪತ್ರ|Speed News Kannada

Letter to Prime Minister seeking support for Women Reservation Bill|ಮಹಿಳಾ ಮೀಸಲಾತಿ ವಿಧೇಯಕ ಬೆಂಬಲಿಸುವಂತೆ ಪ್ರಧಾನಿ ಪತ್ರ|Speed News Kannada

ನರೇಂದ್ರ ಮೋದಿ ಅವರು ಲೋಕಸಭೆ ಹಾಗೂ ರಾಜ್ಯಸಭೆಯ ಎಲ್ಲಾ ಸಂಸದೀಯ ಪಕ್ಷಗಳ ನಾಯಕರಿಗೆ ಮಹತ್ವದ ಪತ್ರ ಬರೆದಿದ್ದಾರೆ. ನಾರಿ ಶಕ್ತಿ ವಂದನಾ ಕಾಯ್ದೆ, ಅಂದರೆ ಮಹಿಳಾ ಮೀಸಲಾತಿ ತಿದ್ದುಪಡಿಗೆ ಸಂಪೂರ್ಣ ಬೆಂಬಲ ನೀಡುವಂತೆ ಪ್ರಧಾನಿ ಕರೆ ನೀಡಿದ್ದಾರೆ. ಏಪ್ರಿಲ್ 16ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಈ ಐತಿಹಾಸಿಕ ತಿದ್ದುಪಡಿಯನ್ನು ಸರ್ವಾನುಮತದಿಂದ ಅಂಗೀಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಇದೇ ವೇಳೆ ಭಾರತೀಯ ಜನತಾ ಪಕ್ಷ ತನ್ನ ಎಲ್ಲಾ ಸಂಸದರಿಗೆ ವಿಪ್ ಜಾರಿ ಮಾಡಿ, ಏಪ್ರಿಲ್ 16, 17 ಮತ್ತು 18ರಂದು ಸದನದಲ್ಲಿ ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಿದೆ.

ಪತ್ರದಲ್ಲಿ ಮಾತನಾಡಿರುವ ಪ್ರಧಾನಿ ಮೋದಿ, ದೇಶದ ಅಭಿವೃದ್ಧಿಗೆ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆ ಅತ್ಯಂತ ಅಗತ್ಯ ಎಂದು ಒತ್ತಿ ಹೇಳಿದ್ದಾರೆ. 2029ರ ಲೋಕಸಭೆ ಚುನಾವಣೆ ಹಾಗೂ ಮುಂದಿನ ವಿಧಾನಸಭಾ ಚುನಾವಣಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ಜಾರಿಗೊಳಿಸುವ ಉದ್ದೇಶವನ್ನು ಪುನರುಚ್ಚರಿಸಿದ್ದಾರೆ.

ಅವರು ಮುಂದುವರೆದು, ಬಾಹ್ಯಾಕಾಶದಿಂದ ಕ್ರೀಡೆವರೆಗೆ, ಸಶಸ್ತ್ರ ಪಡೆಗಳಿಂದ ಸ್ಟಾರ್ಟ್‌ಅಪ್‌ಗಳವರೆಗೆ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿದ್ದಾರೆ. ಮಹಿಳೆಯರಿಗೆ ಅವಕಾಶ ನೀಡಿದಾಗ ಮಾತ್ರ ಸಮಾಜದ ಸಮಗ್ರ ಪ್ರಗತಿ ಸಾಧ್ಯವೆಂದು ಹೇಳಿದ್ದಾರೆ.ಈ ವಿಶೇಷ ಅಧಿವೇಶನ ದೇಶದ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವ ಐತಿಹಾಸಿಕ ಅವಕಾಶವಾಗಿದ್ದು, ಎಲ್ಲಾ ಪಕ್ಷಗಳ ಸಹಕಾರ ಅಗತ್ಯವೆಂದು ಪ್ರಧಾನಿ ಮನವಿ ಮಾಡಿದ್ದಾರೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.