2026-06-08 02:43:52

Lokayukta department gives shock to corrupt officials | ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ನೀಡಿದ ಲೋಕಾಯುಕ್ತ ಇಲಾಖೆ ಆಸ್ತಿಪಾಸ್ತಿ ಕಂಡು ದಂಗಾದ ಪೊಲೀಸರು | Speed News Kannada

Lokayukta department gives shock to corrupt officials | ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ನೀಡಿದ ಲೋಕಾಯುಕ್ತ ಇಲಾಖೆ ಆಸ್ತಿಪಾಸ್ತಿ ಕಂಡು ದಂಗಾದ ಪೊಲೀಸರು | Speed News Kannada

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಖಾರಿಗಳಿಗೆ ಶಾಕ್‌ ನೀಡಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ, ಧಾರವಾಡ, ಹಾಸನ, ವಿಜಯಪುರ ಮತ್ತು ಯಾದಗಿರಿ ಸೇರಿ 8 ಜಿಲ್ಲೆಗಳಲ್ಲಿ ದಾಳಿ ನಡೆದಿದೆ.
ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ), ವಿದ್ಯುತ್ ಇಲಾಖೆ (ಕೆಪಿಟಿಸಿಎಲ್/ ಬೆಸ್ಕಾಂ), ಜಲಮಂಡಳಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಉನ್ನತ ಹುದ್ದೆಗಳಲ್ಲಿರುವವರ ಮನೆ ಹಾಗೂ ಕಚೇರಿಗಳ ಶೋಧ ಕಾರ್ಯ ಕೈಗೊಳ್ಳಲಾಗಿದೆ.
ಅಧಿಕಾರಿಗಳು ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದ ಮಹತ್ವದ ದಾಖಲೆಗಳು, ಬ್ಯಾಂಕ್ ಖಾತೆಗಳ ವಿವರ ಮತ್ತು ನಗದನ್ನು ವಶಪಡಿಸಿಕೊಂಡು ಪರಿಶೀಲಿಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.
ಹಾಸನ ಮಹಾನಗರ ಪಾಲಿಕೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ (ಇ ಇ)  ಸತ್ಯನಾರಾಯಣ, ಮಂಡ್ಯದಲ್ಲಿ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಎಇಇ ಸತೀಶ್, ಬಾಗಲಕೋಟೆಯಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್‌ಡಿಸಿಎಲ್‌) ಮುಖ್ಯ ಇಂಜಿನಿಯರ್ ವಸಂತ್ ವಾಲಪ್ಪ ನಾಯಕ್, ಮೈಸೂರಿನಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎಇಇ ಆಸಿಫ್ ಇಕ್ಬಾಲ್, ಯಾದಗಿರಿ ವಿದ್ಯುತ್ ಇಲಾಖೆಯ ಡೆಪ್ಯುಟಿ ಎಲೆಕ್ಟ್ರಿಕಲ್ ಇನ್‌ಸ್ಪೆಕ್ಟರ್ ವಿರೇಶ್ ಹಿರೇಮಠ್, ಧಾರವಾಡದಲ್ಲಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಂ. ಕೆ. ಸುರಕೋಡ್ ಅವರ ನಿವಾಸಗಳು ಮತ್ತು ಕಚೇರಿಗಳ ಮೇಲೆ ದಾಳಿ ನಡೆಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಾಸನದಲ್ಲಿ ಎಎಇ ಸತ್ಯನಾರಾಯಣ ಅವರು ಮನೆ ಬಾಗಿಲು ತೆರೆಯಲು ನಿರಾಕರಿಸಿದಾಗ, ಲೋಕಾಯುಕ್ತ ಪೊಲೀಸರು ಜೀಪ್ ಮೇಲೆ ಹತ್ತಿ ಮೊದಲ ಮಹಡಿಯ ಮೂಲಕ ಮನೆಯೊಳಗೆ ಪ್ರವೇಶಿಸಿದ್ದಾರೆ ಎಂದು ತಿಳಿದು ಬಂದಿದೆ. ಬಾಗಲಕೋಟೆಯಲ್ಲಿ ಕೆಆರ್‌ಡಿಸಿಎಲ್‌ ಇಂಜಿನಿಯರ್ ವಸಂತ್ ವಾಲಪ್ಪ ನಾಯಕ್ ಅವರ ಮನೆಯಲ್ಲಿ ಶೋಧ ನಡೆಸುತ್ತಿದ್ದಾಗ ಕೆರೆ ಹಾವೊಂದು ನುಗ್ಗಿ ಕೆಲಕಾಲ ಆತಂಕ ಸೃಷ್ಟಿಸಿದೆ.
ಅಕ್ರಮವಾಗಿ ಗಳಿಸಿರುವ ಆಸ್ತಿ ಪತ್ರಗಳು, ಚಿನ್ನ ಬೆಳ್ಳಿ ಆಭರಣ ಮತ್ತು ನಗದನ್ನು ಕಂಡು ಲೋಕಾಯುಕ್ತ ಅಧಿಕಾರಿಗಳು ದಂಗಾಗಗಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.