2026-06-25 03:42:12

Lorry driver commits suicide after being caught by police | ಮದ್ಯ ಸೇವಿಸಿ ಪೊಲೀಸರಿಗೆ ಸಿಕ್ಕಿಬಿದ್ದ ಲಾರಿ ಚಾಲಕ ಆತ್ಮಹತ್ಯೆ | Speed News Kannada

Lorry driver commits suicide after being caught by police | ಮದ್ಯ ಸೇವಿಸಿ ಪೊಲೀಸರಿಗೆ ಸಿಕ್ಕಿಬಿದ್ದ ಲಾರಿ ಚಾಲಕ ಆತ್ಮಹತ್ಯೆ | Speed News Kannada

ಬೆಂಗಳೂರು, ಏ.5- ಲಾರಿ ಚಾಲಕನೊಬ್ಬ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಜೆ ಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಷಣುಗ (26) ಆತಹತ್ಯೆಗೆ ಶರಣಾದ ಲಾರಿ ಚಾಲಕ. ತಮಿಳುನಾಡಿನಿಂದ ಲಾರಿಯಲ್ಲಿ ಲೋಡ್ ಮಾಡಿಕೊಂಡು ಚಾಲಕ ಬೆಂಗಳೂರಿಗೆ ಬಂದು ಜೆಪಿನಗರ 22ನೇ ಮುಖ್ಯರಸ್ತೆಯಲ್ಲಿ ಹೋಗುತ್ತಿದ್ದರು. ಆ ಸಂದರ್ಭದಲ್ಲಿ ಜೆಪಿನಗರ ಸಂಚಾರಿ ಠಾಣೆ ಪೊಲೀಸರು ಡ್ರಂಕ್ ಅಂಡ್ ಡ್ರೈವ್ ಪರಿಶೀಲನೆ ಮಾಡಲು ವಾಹನಗಳನ್ನು ತಪಾಸಣೆ ಮಾಡುತ್ತಿದ್ದರು.
ಇದೇ ಮಾರ್ಗದಲ್ಲಿ ಬಂದ ಈ ಲಾರಿಯನ್ನು ತಡೆದು ಚಾಲಕನನ್ನು ಪರೀಕ್ಷಿಸಿದಾಗ ಮದ್ಯ ಸೇವಿಸಿರುವುದು ಕಂಡು ಬಂದಿದೆ. ಹಾಗಾಗಿ ಆತನಿಗೆ ನೋಟೀಸ್ ಕೊಟ್ಟು ಕಳುಹಿಸಿದ್ದಾರೆ. ಇದರಿಂದ ಬೇಸರಗೊಂಡು ಲಾರಿ ಚಾಲಕ ಮಾಲೀಕರಿಗೆ ಗೊತ್ತಾದರೆ ನನಗೆ ಬೈಯುತ್ತಾರೆಂದು ಹೆದರಿ 32ನೇ ಮುಖ್ಯ ರಸ್ತೆಗೆ ಹೋಗಿ ಲಾರಿ ಸ್ಟ್ಯಾಂಡ್‌ನಲ್ಲಿ ನಿಲ್ಲಿಸಿದ್ದ ಲಾರಿಯ ಟಾಪ್‌ನ ಹುಕ್ಕಿಗೆ ಹಗ್ಗದಿಂದ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿದ್ದಾನೆ. ಈ ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಹೋಗಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು, ಮೃತನ ಕುಟುಂಬಕ್ಕೆ ಮಾಹಿತಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.