2026-04-23 10:53:28

Lorry runs over a baby dies on the spot | ಹಸುಗೂಸಿನ ಮೇಲೆ ಹರಿದ ಲಾರಿ ಮಗು ಸ್ಥಳದಲ್ಲೇ ಸಾ*ವು | Speed News Kannada

Lorry runs over a baby dies on the spot | ಹಸುಗೂಸಿನ ಮೇಲೆ ಹರಿದ ಲಾರಿ ಮಗು ಸ್ಥಳದಲ್ಲೇ ಸಾ*ವು | Speed News Kannada

ಬೆಂಗಳೂರು : ಬೆಂಗಳೂರಲ್ಲಿ ಘನಘೋರ ದುರಂತ ಸಂಭವಿಸಿದ್ದು, ಲಾರಿ ಹರಿದು ನಾಲ್ಕು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ದುರಂತ ನಡೆದಿದೆ. ಬೆಂಗಳೂರಿನ ಉತ್ತರ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತೇಗೌಡನ ಪಾಳ್ಯದಲ್ಲಿ ಘಟನೆ ನಡೆದಿದೆ.
ನಿಶಿಕಾ (4) ಮೃತ ಬಾಲಕಿ ಎಂದು ಗುರುತಿಸಲಾಗಿದೆ.ಯುಗಾದಿ ಹಬ್ಬ ಮುಗಿಸಿ ತಾಯಿ-ಮಗಳು ದೇವರ ದರ್ಶನಕ್ಕೆಂದು ದೇವಸ್ಥಾನಕ್ಕೆ ತೆರಳುತ್ತಿದ್ದರು. ಎರಡನೇ ಮಗು ಕಂಕುಳಲ್ಲಿ ಹಾಗೂ ಮೊದಲ ಮಗುವಿನ ಕೈ ಹಿಡಿದು ತೆರಳುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ದ ಲಾರಿ ಏಕಾಏಕಿ ಮಗುವಿನ ಮೇಲೆ ಹರಿದಿದೆ.
ಅಪಘಾತದ ಪರಿಣಾಮ ಹೆತ್ತ ತಾಯಿಯ ಎದುರೇ ಬಾಲಕಿ ಪ್ರಾಣ ಹೋಗಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಸರ್ಕಾರಿ ಶವಗಾರಕ್ಕೆ ರವಾನಿಸಲಾಗಿದೆ ಮನೆ ಮಗುವನ್ನು ಕಳೆದುಕೊಂಡು ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಇಡೀ ಮನೆಯಲ್ಲಿ ನೀರವ ಮೌನ ಆವರಿಸಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.