ತುಮಕೂರು: ಓದೋ ಹುಡುಗರು ಲವ್ ನಲ್ಲಿ ಬಿದ್ದರೆ ಏನಾಗುತ್ತೆ ಅನ್ನೋದಕ್ಕೆ ಮತ್ತೊಂದು ಉದಾಹರಣೆಯಂತಿದೆ ಈ ಪ್ರಕರಣ.
ತುಮಕೂರು ಜಿಲ್ಲೆಯ ತುರುವೇಕೆರೆಯ ಡಿಪ್ಲೊಮಾ ವಿದ್ಯಾರ್ಥಿ ಧನುಷ್ (19) ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಾರಣ ಲವ್ ಫೇಲ್ಯೂರ್!
ಧನುಷ್ ತುರುವೇಕೆರೆಯ ಸರ್ಕಾರಿ ಡಿಪ್ಲೊಮಾ ಕಾಲೇಜಿನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ. ಆತ್ಮಹತ್ಯೆಗೂ ಮುನ್ನ ಭಾವನಾತ್ಮಕ ಸ್ಟೇಟಸ್ ಹಾಕಿಕೊಂಡಿದ್ದಾನೆ.
ಬುಧವಾರ ಕಾಲೇಜಿಗೆ ಹೋದವನು ಮನೆಗೆ ಮರಳಿರಲಿಲ್ಲ. ಪೋಷಕರು ಕರೆ ಮಾಡಿದರೂ ಫೋನ್ ಸ್ವೀಕರಿಸಿರಲಿಲ್ಲ. ಇದರಿಂದ ಗಾಬರಿಗೊಂಡ ಪೋಷಕರು ಹುಡುಕಾಟ ನಡೆಸಿದಾಗ ಕಾಲೇಜಿನ ಹಿಂಭಾಗ ಇರುವ ಕಟ್ಟೆಯೊಂದರ ಮೇಲೆ ಬ್ಯಾಗ್, ಚಪ್ಪಲಿ, ಮೊಬೈಲ್ ಪತ್ತೆಯಾಗಿದ್ದವು. ಕೊಡಲೇ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.
ವಾಟ್ಸಾಪ್ ಮತ್ತು ಫೇಸ್‌ಬುಕ್‌ನಲ್ಲಿ ಭಾವನಾತ್ಮಕ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾಗಿರುವುದು ಈಗ ಬೆಳಕಿಗೆ ಬಂದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಕಾರ್ಯಚರಣೆ ನಡೆಸಿ ನೀರಿನ ಕಟ್ಟೆಯಿಂದ ಶವವನ್ನು ಹೊರತೆಗೆದಿದ್ದಾರೆ.
“ನೀನೇ ಖುಷಿಯಾಗಿರು, ನಾನು ಈ ಪ್ರಪಂಚವನ್ನೇ ಬಿಟ್ಟು ಹೋಗುತ್ತಿದ್ದೇನೆ… ಬಾಯ್” ಎಂದು ಸ್ಟೇಟಸ್ ಹಾಕಿಕೊಂಡಿದ್ದಾನೆ. ಪ್ರೇಮ ವೈಫಲ್ಯದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮತ್ತೊಂದು ಕಡೆ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.