2026-06-25 02:04:40

Lucky Oberoi | ಪಂಜಾಬ್ ಗುರುದ್ವಾರದ ಹೊರಗೆ ಎಎಪಿ ಪಕ್ಷದ ಮುಖಂಡ ಲಕ್ಕಿ ಒಬೆರಾಯ್ ಗುಂಡಿಕ್ಕಿ ಹತ್ಯೆ | Speed News Kannada

Lucky Oberoi | ಪಂಜಾಬ್ ಗುರುದ್ವಾರದ ಹೊರಗೆ ಎಎಪಿ ಪಕ್ಷದ ಮುಖಂಡ ಲಕ್ಕಿ ಒಬೆರಾಯ್ ಗುಂಡಿಕ್ಕಿ ಹತ್ಯೆ | Speed News Kannada

ಜಲಂಧರ್‌: ಪಂಜಾಬ್‌ನ ಜಲಂಧರ್‌ನಲ್ಲಿ ಇಂದು ಶುಕ್ರವಾರ ಹಾಡಹಗಲೇ ಇಲ್ಲಿನ ಗುರುದ್ವಾರದ ಹೊರಗೆ ಆಮ್ ಆದ್ಮಿ ಪಕ್ಷದ ಮುಖಂಡ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. 
ದ್ವಿಚಕ್ರ ವಾಹನದಲ್ಲಿ ಆಗಮಿಸಿದ ಅಪರಿಚಿತ ದುಷ್ಕರ್ಮಿಗಳು ಮಾಡೆಲ್ ಟೌನ್ ಪ್ರದೇಶದ ಸಮೀಪವಿರುವ ಗುರುದ್ವಾರದ ಬಳಿ ಲಕ್ಕಿ ಒಬೆರಾಯ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅವರು  ಗುರುದ್ವಾರದ ಹೊರಗೆ ತಮ್ಮ ಜೀಪಿನೊಳಗೆ ಇದ್ದರು ಎನ್ನಲಾಗಿದೆ.
ರಕ್ತದ ಮಡುವಿನಲ್ಲಿ ಬಿದ್ದದ್ದ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯೆಯೇ ಅಸುನೀಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಜಲಂಧರ್ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಘಟನೆಗೆ ಯಾರು ಕಾರಣ ಎಂದು ತಿಳಿದು ಬಂದಿಲ್ಲ. ಯಾವುದೇ ಸಂಘಟನೆಯೂ ಜವಬ್ದಾರಿ ಹೊತ್ತಿಲ್ಲ. ಇತ್ತೀಚೆಗೆ ನಡೆದ ಜಲಂದರ್‌ ಪಾಲಿಕೆ ಚುನಾವಣೆಯಲ್ಲಿ ಲಕ್ಕಿ ಒಬೆರಾಯ್ ಅವರ ಪತ್ನಿ ಸ್ಪರ್ಧಿಸಿ ಪರಾಭವ ಹೊಂದಿದ್ದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.