2026-03-07 06:13:28

M M Naravanes Four Stars of Destiny Has Not Been Published Yet | ಎಂ ಎಂ ನರವಣೆ ಅವರ ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ ಇನ್ನೂ ಪ್ರಕಟವಾಗಿಲ್ಲ ಪೆಂಗ್ವಿನ್ ಸ್ಪಷ್ಟನೆ | Speed News Kannada

M M Naravanes Four Stars of Destiny Has Not Been Published Yet | ಎಂ ಎಂ ನರವಣೆ ಅವರ ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ ಇನ್ನೂ ಪ್ರಕಟವಾಗಿಲ್ಲ ಪೆಂಗ್ವಿನ್ ಸ್ಪಷ್ಟನೆ | Speed News Kannada

ನವದೆಹಲಿ: ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಪುಸ್ತಕವನ್ನು ಮಾರಾಟ ಮಾಡುತ್ತಿಲ್ಲ ಎಂದು ಪ್ರಕಾಶನ ಹಕ್ಕುಗಳನ್ನು ಹೊಂದಿರುವ ಪೆಂಗ್ವಿನ್ ರ್‍ಯಾಂಡಮ್ ಹೌಸ್ ಇಂಡಿಯಾ ಸ್ಪಷ್ಟಪಡಿಸಿದೆ.
ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಪೆಂಗ್ವಿನ್ ಇಂಡಿಯಾ ಈ ಪುಸ್ತಕ ಪ್ರಕಟಣೆಗೆ ಬಂದಿಲ್ಲ. ಮುದ್ರಿತ ಅಥವಾ ಡಿಜಿಟಲ್ ಪ್ರತಿಗಳನ್ನು ಪ್ರಕಟಣೆ, ವಿತರಣೆ, ಮಾರಾಟ ಅಥವಾ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿಲ್ಲ ಎಂದು ಹೇಳಿದೆ.
ಪ್ರಸ್ತುತ ಆನ್‌ಲೈನ್ ಅಥವಾ ಆಫ್‌ಲೈನ್‌ನಲ್ಲಿ ಹರಿದಾಡುತ್ತಿರುವ ನರವಣೆ ಪುಸ್ತಕದ ಸಂಪೂರ್ಣ ಅಥವಾ ಭಾಗಶಃ ಭಾಗಗಳು ಮುದ್ರಣ, ಡಿಜಿಟಲ್, ಪಿಡಿಎಫ್ ಅಥವಾ ಯಾವುದೇ ಇತರ ಸ್ವರೂಪದ ಪ್ರತಿಗಳು ಹಕ್ಕುಸ್ವಾಮ್ಯದ ಉಲ್ಲಂಘನೆಯಾಗಿದೆ. ಅದನ್ನು ತಕ್ಷಣವೇ ನಿಲ್ಲಿಸಬೇಕು . ಪುಸ್ತಕದ ಕಾನೂನುಬಾಹಿರ ಮತ್ತು ಅನಧಿಕೃತ ಪ್ರಸರಣದ ವಿರುದ್ಧ ಕಾನೂನಿನಡಿಯಲ್ಲಿ ಲಭ್ಯವಿರುವ ಪರಿಹಾರಗಳನ್ನು ಬಳಸಬೇಕಾಗುತ್ತದೆ ಎಂದೂ ಪ್ರಕಾಶಕರು ಹೇಳಿದ್ದಾರೆ.
ಕಳೆದ ವಾರ ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಈ ಪುಸ್ತಕದ ಕೆಲವು ಅಂಶಗಳನ್ನು ಉಲ್ಲೇಖಿಸಿದ್ದರು. ಆದರೆ ಸರ್ಕಾರ ಇದನ್ನು ವಿರೋಧಿಸಿತ್ತು. 
ದೂರು ದಾಖಲು: ನರವಣೆ ಅವರ ಅಪ್ರಕಟಿತ ಕೃತಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುವ ಸಂಬಂಧ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.
‘ಫೋರ್‌ ಸ್ಟಾರ್ಸ್‌ ಆಫ್‌ ಡೆಸ್ಟಿನಿ’ ಎಂಬ ಶೀರ್ಷಿಕೆಯ ಕೃತಿಯ ಮುದ್ರಣ ಪೂರ್ವ ಪ್ರತಿಯನ್ನು ಅನುಮತಿ ಪಡೆಯದೆ ಸಾಮಾಜಿಕ ಜಾಲತಾಣಗಳು ಮತ್ತು ಆನ್‌ಲೈನ್‌ ಸುದ್ದಿ ವೇದಿಕೆಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ದೆಹಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.