2026-07-23 11:30:05

Major security lapse at Chinnaswamy Stadium|ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರೀ ಭದ್ರತಾ ಲೋಪ|Speed News Kannada

Major security lapse at Chinnaswamy Stadium|ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರೀ ಭದ್ರತಾ ಲೋಪ|Speed News Kannada

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದ ದಿನ ಭಾರೀ ಭದ್ರತಾ ಲೋಪ ಬೆಳಕಿಗೆ ಬಂದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯಕ್ಕೂ ಮುನ್ನ ಸುಮಾರು 240 ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಉದ್ದೇಶಪೂರ್ವಕವಾಗಿ ಕಡಿತಗೊಳಿಸಲಾಗಿತ್ತು. ಸರ್ವರ್ ರೂಂಗೆ ಅನಧಿಕೃತ ಪ್ರವೇಶ ಪಡೆದ ಇಬ್ಬರು ಆರೋಪಿಗಳು ಎನ್‌ವಿಆರ್ ಹಾಗೂ ಫೈಬರ್ ಸಂಪರ್ಕ ಕಡಿತಗೊಳಿಸಿದ್ದರೆಂದು ತನಿಖೆಯಲ್ಲಿ ತಿಳಿದುಬಂದಿದೆ.

ಪೊಲೀಸರು ತಕ್ಷಣ ಕ್ರಮ ಕೈಗೊಂಡು ಬದಲಿ ವ್ಯವಸ್ಥೆ ಮಾಡಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆದಿದ್ದಾರೆ. ಇದೇ ವೇಳೆ, ಪಂದ್ಯದಲ್ಲಿ ಬ್ಲ್ಯಾಕ್ ಟಿಕೆಟ್ ದಂಧೆ ಭೇದಿಸಿದ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ. ಒಟ್ಟು 19 ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕೆಲವು ಟಿಕೆಟ್‌ಗಳನ್ನು ಹೆಚ್ಚು ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು. ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.