2026-06-25 02:03:58

Mallikarjun Muthiahs Pox case postponed | ಪೋಕ್ಸ್ ಕೇಸ್ರ ರದ್ದು ಕೋರಿ ಮಲ್ಲಿಕಾರ್ಜುನ್ ಮುತ್ಯಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ | Speed News Kannada

Mallikarjun Muthiahs Pox case postponed | ಪೋಕ್ಸ್ ಕೇಸ್ರ ರದ್ದು ಕೋರಿ ಮಲ್ಲಿಕಾರ್ಜುನ್ ಮುತ್ಯಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ | Speed News Kannada

ಕಲಬುರಗಿ: ಬಾಲಕಿ ಜೊತೆ ಅನುಚಿತ ವರ್ತನೆ ಆರೋಪದಡಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ್ ಮುತ್ಯಾ  ಮೇಲೆ ಪೋಕೋ ಕೇಸ್ (POCSO Case) ಹಾಕಲಾಗಿದೆ. ಪ್ರಕರಣ ರದ್ದು ಕೋರಿ ಕರ್ನಾಟಕ ಹೈಕೋರ್ಟ್ ಕಲಬುರಗಿ ವಿಭಾಗೀಯ ಪೀಠದ ಮೆಟ್ಟಿಲೇರಿದ್ದರು. ಇದೀಗ ಎಫ್ ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಮುಂದೂಡಿಕೆ ಮಾಡಲಾಗಿದೆ. ಎಫ್‌ಐಆ‌ರ್ ರದ್ದುಗೊಳಿಸುವಂತೆ ಕೋರಿ ಅರ್ಜಿ ವಿಚಾರಣೆ ಮುಂದೂಡಿಕೆ ಮಲ್ಲಿಕಾರ್ಜುನ ಮುತ್ಯಾ ದಾಖಲಾದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಕಲಬುರಗಿ ಹೈಕೋರ್ಟ್‌ಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ "ಪೋಷಕರು ದೂರು ನೀಡಿಲ್ಲ. ಪೊಲೀಸರು ಸ್ವಯಂ ಪ್ರೇರಿತವಾಗಿ ಕೇಸ್ ದಾಖಲಿಸಿದ್ದಾರೆ" ಎಂದು ವಾದಿಸಲಾಗಿದೆ. ಹೈಕೋರ್ಟ್ ಕಲಬುರಗಿ ವಿಭಾಗೀಯ ಪೀಠದಲ್ಲಿ ಈ ಅರ್ಜಿ ಸಲ್ಲಿಸಲಾಗಿದೆ. ಮೊದಲು ವಿಚಾರಣೆಗೆ ದಿನಾಂಕ ನಿಗದಿಯಾಗಿತ್ತು ಆದರೆ ವಕೀಲರ ಮನವಿ ಮೇರೆಗೆ ವಿಚಾರಣೆಯನ್ನು ಮುಂದೂಡಲಾಗಿದೆ. ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಬೇಲ್ ಅರ್ಜಿ ವಿಚಾರಣೆ ನಡೆಯುವ ಹಿನ್ನೆಲೆಯಲ್ಲಿ ಹೈಕೋರ್ಟ್‌ನಲ್ಲಿ ಕಾಲಾವಕಾಶ ಕೇಳಲಾಗಿದೆ ಎಂದು ತಿಳಿದುಬಂದಿದೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ಮಾಡಿದ್ದರು. ಮಲ್ಲಿಕಾರ್ಜುನ ಮುತ್ಯಾ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಯಿತು. ನೋಟಿಸ್‌ ಮಠದ ಮಹಲ್ ರೋಜಾ ಗ್ರಾಮದಲ್ಲಿ ಅಂಟಿಸಲಾಯಿತು. ಆದರೆ ಮಲ್ಲಿಕಾರ್ಜುನ ಮುತ್ಯಾ ವಿಚಾರಣೆಗೆ ಹಾಜರಾಗಲಿಲ್ಲ. ಇದರಿಂದ ಬಂಧನದ ಭಯ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ. ಕೆಲವು ವರದಿಗಳ ಪ್ರಕಾರ ಅವರು ತಾತ್ಕಾಲಿಕವಾಗಿ ಅಜ್ಞಾತ ಸ್ಥಳಕ್ಕೆ ಹೋಗಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಅವರು ವಿಡಿಯೊ ಬಿಡುಗಡೆ ಮಾಡಿ ಭಕ್ತರನ್ನು ಶಾಂತಗೊಳಿಸಿದ್ದಾರೆ.
"ನಾನು ಇಲ್ಲೇ ಇದ್ದೇನೆ, ಆತಂಕ ಪಡಬೇಡಿ" ಎಂದು ಹೇಳಿದ್ದಾರೆ. ಪ್ರಕರಣದ ನಂತರ ಮಠದಲ್ಲಿ ಭಕ್ತರು ಸಭೆ ಸೇರಿದ್ದಾರೆ. ಕೇಸ್ ರದ್ದು ಮಾಡುವಂತೆ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ. ಕೆಲವರು ಎರಡು ದಿನಗಳ ಗಡುವು ನೀಡಿದ್ದಾರೆ ಎಂದು ವರದಿಯಾಗಿದೆ. ಭಕ್ತರು ಪ್ರಕರಣವನ್ನು ಸುಳ್ಳು ಎಂದು ಹೇಳುತ್ತಿದ್ದಾರೆ. ವೀಡಿಯೊವನ್ನು ತಿರುಚಿ ವೈರಲ್ ಮಾಡಲಾಗಿದೆ ಎಂದು ವಾದಿಸುತ್ತಾರೆ. ಸದ್ಯ ಪೊಲೀಸರು ತನಿಖೆ ಮುಂದುವರೆಸುತ್ತಿದ್ದಾರೆ. ಮಲ್ಲಿಕಾರ್ಜುನ ಮುತ್ಯಾ ಹಾಜರಾಗದ ಕಾರಣ ಬಂಧನದ ಸಾಧ್ಯತೆ ಇದೆ. ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಮುಂದೂಡಲಾಗಿದ್ದು, ಮುಂದಿನ ದಿನಗಳಲ್ಲಿ ನಿರ್ಧಾರ ಬರಬಹುದು. ಈ ಪ್ರಕರಣವು ಸ್ಥಳೀಯವಾಗಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.