2026-06-08 01:30:29

Man loses Rs 1.28 crore after trusting online advertisement | ಆನ್‌ಲೈನ್‌ ಜಾಹಿರಾತು ನಂಬಿ 1.28 ಕೋಟಿ ಕಳೆದುಕೊಂಡ ವ್ಯಕ್ತಿ | Speed news kannada

Man loses Rs 1.28 crore after trusting online advertisement | ಆನ್‌ಲೈನ್‌ ಜಾಹಿರಾತು ನಂಬಿ 1.28 ಕೋಟಿ ಕಳೆದುಕೊಂಡ ವ್ಯಕ್ತಿ | Speed news kannada

ಇತ್ತೀಚಿಗೆ ಸಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾಗುವ ಆನ್‌ಲೈನ್‌ ಜಾಹಿರಾತುಗಳಿಂದ ಸಾಕಷ್ಟು ಜನರನ್ನು ವಂಚಿಸುತ್ತಿದ್ದಾರೆ. ಅದೇ ರೀತಿ ಚಿಕ್ಕಮಗಳೂರಿನ ಓರ್ವ ವ್ಯಕ್ತಿ ಫೆಸ್‌ಬುಕ್‌ನಲ್ಲಿ ಬಂದಿರುವ ಜಾಹಿರಾತನ್ನು ನಂಬಿ ಬರೋಬ್ಬರಿ 1.28 ಕೋಟಿ ರೂ ಹಣವನ್ನು ಕಳೆದುಕೊಂಡಿದ್ಧಾನೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ‌ ಶಿವಪುರ ಗ್ರಾಮದ ನಿವಾಸಿ ಕಲ್ಲೇಗೌಡ ಎಂಬುವರಿಗೆ ಖದೀಮರು ಆನ್​ಲೈನ್​ ಟ್ರೇಡಿಂಗ್​ ಇನ್ವೆಸ್ಟ್​ಮೆಂಟ್​ ಹೆಸರಲ್ಲಿ ಕೋಟ್ಯಂತರ ರೂ ಹಣ ವಂಚಿಸಿದ್ದಾರೆ. ‘FYERS’ ಎಂಬ‌ ಟ್ರೇಡಿಂಗ್ ಜಾಹೀರಾತನ್ನು ಫೇಸ್​ಬುಕ್​ನಲ್ಲಿ ನೋಡಿದ ಕಲ್ಲೇಗೌಡರು F8-FYERS ಸೆಕ್ಯೂರಿಟೀಸ್ ವಾಟ್ಸಾಪ್​ ಗ್ರೂಪ್​ ಸೇರಿದ್ದಾರೆ. ಆನ್‌ಲೈನ್‌ ಟ್ರೇಡಿಂಗ್‌ನಲ್ಲಿ ಲಾಭಗಳಿಸುವ ಆಸೆ ತೋರಿಸಿ ಹಂತ ಹಂತವಾಗಿ 1 ಕೋಟಿ 28ಲಕ್ಷ ರೂಪಾಯಿ ಪಡೆದುಕೊಂಡು ವಂಚಿಸಿದ್ದಾರೆ. ಸದ್ಯ ಕಲ್ಲೇಗೌಡರು ಸಿಇಎನ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ಧಾರೆ.   

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.