ಇತ್ತೀಚಿಗೆ ಸಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾಗುವ ಆನ್‌ಲೈನ್ ಜಾಹಿರಾತುಗಳಿಂದ ಸಾಕಷ್ಟು ಜನರನ್ನು ವಂಚಿಸುತ್ತಿದ್ದಾರೆ. ಅದೇ ರೀತಿ ಚಿಕ್ಕಮಗಳೂರಿನ ಓರ್ವ ವ್ಯಕ್ತಿ ಫೆಸ್‌ಬುಕ್‌ನಲ್ಲಿ ಬಂದಿರುವ ಜಾಹಿರಾತನ್ನು ನಂಬಿ ಬರೋಬ್ಬರಿ 1.28 ಕೋಟಿ ರೂ ಹಣವನ್ನು ಕಳೆದುಕೊಂಡಿದ್ಧಾನೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಶಿವಪುರ ಗ್ರಾಮದ ನಿವಾಸಿ ಕಲ್ಲೇಗೌಡ ಎಂಬುವರಿಗೆ ಖದೀಮರು ಆನ್‌ಲೈನ್ ಟ್ರೇಡಿಂಗ್ ಇನ್ವೆಸ್ಟ್ಮೆಂಟ್ ಹೆಸರಲ್ಲಿ ಕೋಟ್ಯಂತರ ರೂ ಹಣ ವಂಚಿಸಿದ್ದಾರೆ. ‘FYERS’ ಎಂಬ ಟ್ರೇಡಿಂಗ್ ಜಾಹೀರಾತನ್ನು ಫೇಸ್ಬುಕ್ನಲ್ಲಿ ನೋಡಿದ ಕಲ್ಲೇಗೌಡರು F8-FYERS ಸೆಕ್ಯೂರಿಟೀಸ್ ವಾಟ್ಸಾಪ್ ಗ್ರೂಪ್ ಸೇರಿದ್ದಾರೆ. ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಲಾಭಗಳಿಸುವ ಆಸೆ ತೋರಿಸಿ ಹಂತ ಹಂತವಾಗಿ 1 ಕೋಟಿ 28ಲಕ್ಷ ರೂಪಾಯಿ ಪಡೆದುಕೊಂಡು ವಂಚಿಸಿದ್ದಾರೆ. ಸದ್ಯ ಕಲ್ಲೇಗೌಡರು ಸಿಇಎನ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ಧಾರೆ.