2026-06-25 02:04:49

Man stabbed to death | ಚಾಕುವಿನಿಂದ ಇರಿದು ವ್ಯಕ್ತಿ ಕೊಲೆ | Speed News Kannada

Man stabbed to death | ಚಾಕುವಿನಿಂದ ಇರಿದು ವ್ಯಕ್ತಿ ಕೊಲೆ | Speed News Kannada

ತುಮಕೂರು: ನಗರದ ಮೆಳೇಕೋಟೆ ಬಳಿ ಮಂಗಳವಾರ ಮೊಹ್ಮದ್ ಮುಬಾರಕ್ ಪಾಷ (29) ಎಂಬುವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಕೊಲೆಯಾದ ಪಾಷ ನಗರದ ನಜರಾಬಾದ್ ನಿವಾಸಿ. ಕೊಲೆ ಆರೋಪಿ ಮೆಳೆಕೋಟೆಯ ಇಬ್ರಾಹಿಂ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. 'ಕೊಲೆಯಲ್ಲಿ ಮತ್ತೊಬ್ಬ ಆರೋಪಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಇದ್ದು, ತನಿಖೆ ನಡೆಸಲಾಗುತ್ತಿದೆ' ಎಂದು ಪೊಲೀಸ್ ಮೂಲಗಳು ತಿಳಿಸಿವೆ.
'ಇಬ್ರಾಹಿಂ ವಿರುದ್ಧ ಮುಬಾರಕ್ ಪಾಷ ವಾಮಾಚಾರ ಮಾಡಿಸಿದ್ದರು. ಇದೇ ಕಾರಣದಿಂದ ಕೋಪಗೊಂಡ ಇಬ್ರಾಹಿಂ ತನ್ನ ಸ್ನೇಹಿತನ ಜತೆ ಸೇರಿ ಮುಬಾರಕ್ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡಿದ್ದಾರೆ. ಹಣಕಾಸಿನ ವಿಚಾರಕ್ಕೂ ಹತ್ಯೆ ನಡೆದಿರುವ ಸಂಶಯ ವ್ಯಕ್ತವಾಗಿದೆ' ಎಂದೂ ಮೂಲಗಳು ಹೇಳಿವೆ.
ತಿಲಕ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.