2026-07-23 12:20:31

Mandatory fine warning for garbage segregation in Bengaluru|ಬೆಂಗಳೂರುದಲ್ಲಿ ಕಸ ವಿಂಗಡಣೆ ಕಡ್ಡಾಯ ದಂಡದ ಎಚ್ಚರಿಕೆ|Speed News Kannada

Mandatory fine warning for garbage segregation in Bengaluru|ಬೆಂಗಳೂರುದಲ್ಲಿ ಕಸ ವಿಂಗಡಣೆ ಕಡ್ಡಾಯ ದಂಡದ ಎಚ್ಚರಿಕೆ|Speed News Kannada

ರಾಜಧಾನಿ ಬೆಂಗಳೂರಿನ ಜನತೆಗೆ ಮಹತ್ವದ ಮಾಹಿತಿ. ನಗರದಲ್ಲಿ ಇನ್ನು ಮುಂದೆ ಕಸ ವಿಂಗಡಣೆ ಕಡ್ಡಾಯವಾಗಲಿದೆ. ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸದಿದ್ದರೆ ನಾಗರೀಕರಿಗೆ ದಂಡ ವಿಧಿಸಲು ಅಧಿಕಾರಿಗಳು ಮುಂದಾಗಿದ್ದಾರೆ.ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಗಳು–2026 ಅನ್ವಯ, ಏಪ್ರಿಲ್ 1ರಿಂದ ಈ ನಿಯಮ ಜಾರಿಗೆ ಬರುತ್ತಿದೆ. ಮನೆಮಾಲೀಕರು ಕಸವನ್ನು ಹಸಿ, ಒಣ, ಸ್ಯಾನಿಟರಿ ಹಾಗೂ ವಿಶೇಷ ತ್ಯಾಜ್ಯವಾಗಿ ವಿಂಗಡಿಸಲೇಬೇಕು.

ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಬೆಂಗಳೂರು ಸ್ಟೀಲ್ ವೇಸ್ಟ್ ಮ್ಯಾನೇಜ್‌ಮೆಂಟ್ ಲಿಮಿಟೆಡ್ ವಿಶೇಷ ಕಾರ್ಯಾಚರಣೆ ಆರಂಭಿಸಿದೆ. ಬುಧವಾರದಿಂದ ನಗರಾದ್ಯಂತ ಪರಿಶೀಲನೆ ನಡೆಯಲಿದೆ.ಮೊದಲ ಬಾರಿ ನಿಯಮ ಉಲ್ಲಂಘಿಸಿದರೆ ₹500 ದಂಡ, ಎರಡನೇ ಬಾರಿ ₹1000 ದಂಡ ವಿಧಿಸಲಾಗುತ್ತದೆ. ಪದೇಪದೇ ಉಲ್ಲಂಘನೆ ಮಾಡಿದರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.ಹೀಗಾಗಿ, ಬೆಂಗಳೂರಿನ ನಾಗರಿಕರು ಕಸ ವಿಂಗಡಣೆ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಾವಶ್ಯಕವಾಗಿದೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.