2026-05-05 05:31:15

Massive explosion at Chinese fireworks factory | ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಭೀಕರ ಸ್ಫೋಟ 21 ಮಂದಿಯ ದಾರುಣ ಅಂತ್ಯ | Speed News Kannada

Massive explosion at Chinese fireworks factory | ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಭೀಕರ ಸ್ಫೋಟ 21 ಮಂದಿಯ ದಾರುಣ ಅಂತ್ಯ | Speed News Kannada

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೀನಾದ ಹುನಾನ್ ಪ್ರಾಂತ್ಯದಲ್ಲಿ ಸಂಭವಿಸಿದ ಭಾರೀ ಕೈಗಾರಿಕಾ ದುರಂತ ದೇಶವನ್ನೇ ಬೆಚ್ಚಿಬೀಳಿಸಿದೆ. ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಿಂದ ಹಲವು ಕಾರ್ಮಿಕರು ಸಾವನ್ನಪ್ಪಿದ್ದು, ಗಾಯಾಳುಗಳ ಸಂಖ್ಯೆ ಹೆಚ್ಚಿರುವುದರಿಂದ ಆತಂಕ ಮತ್ತಷ್ಟು ಹೆಚ್ಚಾಗಿದೆ. ಲಿಯುಯಾಂಗ್ ನಗರದಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಸೋಮವಾರ ಸಂಜೆ ಕೆಲಸ ನಡೆಯುತ್ತಿದ್ದ ವೇಳೆ ಏಕಾಏಕಿ ಭಾರೀ ಸ್ಫೋಟ ಸಂಭವಿಸಿದೆ. ಸ್ಪೋಟದ ತೀವ್ರತೆಗೆ ಕಾರ್ಖಾನೆಯ ಹಲವಾರು ಭಾಗಗಳು ಕುಸಿದು ಬಿದ್ದಿದ್ದು, ಸ್ಥಳದಲ್ಲೇ 21 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ನಂತರ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಇದನ್ನೂ ಓದಿ: ನಂದಿಗ್ರಾಮದ ಹಿಂದು ಜನ ನನ್ನನ್ನ ಗೆಲ್ಲಿಸಿದ್ದಾರೆ, ಅವರಿಗೋಸ್ಕರ ನನ್ನ ಮುಂದಿನ ಕೆಲಸ: ಸುವೇಂದು ಅಧಿಕಾರಿ
ಈ ಅವಘಡದಲ್ಲಿ 61ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಗಂಭೀರವಾಗಿರುವ ಕಾರಣ ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯೂ ಇದೆ ಎಂದು ವರದಿಯಾಗಿದೆ. ಘಟನೆಯ ಬೆನ್ನಲ್ಲೇ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ತುರ್ತು ತನಿಖೆಗೆ ಸೂಚನೆ ನೀಡಿದ್ದಾರೆ. ಕೈಗಾರಿಕಾ ಘಟಕಗಳಲ್ಲಿ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ದುರಂತಕ್ಕೆ ನಿಖರ ಕಾರಣ ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.