2026-04-23 06:54:41

Massive explosion near Panama Canal burns fuel tankers|ಪನಾಮ ಕಾಲುವೆ ಬಳಿ ಭೀಕರ ಸ್ಫೋಟ ಇಂಧನ ಟ್ಯಾಂಕರ್‌ಗಳು ಭಸ್ಮ| Speed News Kannada

Massive explosion near Panama Canal burns fuel tankers|ಪನಾಮ ಕಾಲುವೆ ಬಳಿ ಭೀಕರ ಸ್ಫೋಟ ಇಂಧನ ಟ್ಯಾಂಕರ್‌ಗಳು ಭಸ್ಮ| Speed News Kannada

ಅಂತರಾಷ್ಟ್ರೀಯ ವ್ಯಾಪಾರದ ಪ್ರಮುಖ ಕೇಂದ್ರವಾದ ಪನಾಮ ಕಾಲುವೆಯ ಪೆಸಿಫಿಕ್ ಪ್ರವೇಶದ್ವಾರದ ಬಳಿ ಇಂದು ಬೆಳಿಗ್ಗೆ ಭೀಕರ ಸ್ಫೋಟ ಸಂಭವಿಸಿದೆ. ಪನಾಮ ನಗರದ ಬಾಲ್ಬೋವಾ ಎಂಬಲ್ಲಿ ಮೂರು ಇಂಧನ ಟ್ಯಾಂಕರ್‌ಗಳು ಬೆಂಕಿಗಾಹುತಿಯಾಗಿದ್ದು, ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಪನಾಮದ ಲಾ ಬೊಕಾ ಪ್ರದೇಶದಲ್ಲಿ ನಿಂತಿದ್ದ ಇಂಧನ ಟ್ಯಾಂಕರ್‌ಗಳು ಒಂದರ ಹಿಂದೆ ಒಂದರಂತೆ ಸ್ಫೋಟಗೊಂಡಿವೆ. ಬೆಂಕಿಯ ಜ್ವಾಲೆ ಎಷ್ಟಿತ್ತೆಂದರೆ ಪಕ್ಕದಲ್ಲೇ ಇದ್ದ ಬ್ರಿಡ್ಜ್ ಆಫ್ ದಿ ಅಮೆರಿಕಾಸ್ ಸೇತುವೆಯ ಮೇಲಿದ್ದ ವಾಹನಗಳಿಗೂ ಹಾನಿಯುಂಟಾಗಿದೆ. ಘಟನೆಯಲ್ಲಿ ನಾಲ್ವರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ವ್ಯಕ್ತಿ ನಾಪತ್ತೆಯಾಗಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಸುಮಾರು 1,654 ಮೀಟರ್ ಉದ್ದವಿರುವ ಪ್ರಮುಖ ರಸ್ತೆಯಾದ ‘ಬ್ರಿಡ್ಜ್ ಆಫ್ ದಿ ಅಮೆರಿಕಾಸ್’ ಅನ್ನು ಮುನ್ನೆಚ್ಚರಿಕಾ ಕ್ರಮವಾಗಿ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ಸ್ಫೋಟಕ್ಕೆ ನಿಖರವಾದ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲ.ಸದ್ಯ ಪನಾಮ ಕಾಲುವೆಯ ಈ ಭಾಗದಲ್ಲಿ ಬಿಗುವಿನ ವಾತಾವರಣವಿದ್ದು, ನಾಪತ್ತೆಯಾದ ವ್ಯಕ್ತಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.