2026-07-23 10:26:06

Massive fire breaks out in Nandini Layout, Bengaluru |ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಭೀಕರ ಅಗ್ನಿ ಅವಘಡ|Speed News Kannada

Massive fire breaks out in Nandini Layout, Bengaluru |ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಭೀಕರ ಅಗ್ನಿ ಅವಘಡ|Speed News Kannada

ನಂದಿನಿ ಲೇಔಟ್‌ನ ರಾಜಕುಮಾರ್ ಸ್ಮಾರಕದ ಸಮೀಪವಿರುವ 'ಬ್ಲೂ ಲೀಫ್' ಎಲ್‌ಇಡಿ ಗೋಡೌನ್‌ನಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ಅಗ್ನಿ ಅನಾಹುತ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.ಎಲ್‌ಇಡಿ ಸ್ಕ್ರೀನ್ ಮತ್ತು ಬ್ಯಾನರ್‌ಗಳನ್ನು ಸಂಗ್ರಹಿಸುತ್ತಿದ್ದ ಗೋಡೌನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ಅನಾಹುತಕ್ಕೆ ಕಾರಣ ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.ಅಗ್ನಿ ಅನಾಹುತಕ್ಕೆ ಗೋಡೌನ್ ಸಂಪೂರ್ಣ ಭಸ್ಮವಾಗಿದ್ದು, ಮುಂಭಾಗ ನಿಲ್ಲಿಸಿದ್ದ ಬುಲೆಟ್ ಮತ್ತು ಬೊಲೆರೊ ಪಿಕಪ್ ವಾಹನಗಳು ಸುಟ್ಟು ಕರಕಲಾಗಿವೆ.

ಬೆಂಕಿಯ ಕೆನ್ನಾಲಿಗೆ ಪಕ್ಕದ 4 ಅಂತಸ್ತಿನ ಮಹಿಳಾ ಪಿಜಿ ಕಟ್ಟಡಕ್ಕೂ ವ್ಯಾಪಿಸಿದೆ. ಇದರಿಂದ ಪಿಜಿಯಲ್ಲಿದ್ದ 50 ಮಹಿಳೆಯರು ಅಲ್ಪಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ತೀವ್ರತೆಗೆ ಪಕ್ಕದ ಮನೆಗಳ ಗೋಡೆಗಳು ಬಿರುಕು ಬಿಟ್ಟಿದ್ದು, ಕಿಟಕಿ ಗಾಜುಗಳು ಪುಡಿಯಾಗಿವೆ.ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ತೀವ್ರ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವಾದರೂ, ಸ್ಥಳೀಯರು ಆತಂಕದಲ್ಲಿದ್ದಾರೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.