ಸ್ಯಾಂಡಲ್‌ವುಡ್‌ನಲ್ಲಿ ಹೊಸ ಪ್ರತಿಭೆಗೆ ದೊಡ್ಡ ಮಾನ್ಯತೆ ಸಿಕ್ಕಿದೆ. ನಟ ಕಿಚ್ಚ ಸುದೀಪ್ ಅವರ ಪುತ್ರಿ ಸಾನ್ವಿ ಸುದೀಪ್ ಇದೀಗ ‘ಅತ್ಯುತ್ತಮ ಗಾಯಕಿ’ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಮಾರ್ಕ್ ಚಿತ್ರದ ‘ಮಸ್ತ್ ಮಲೈಕಾ’ ಹಾಡಿನ ಮೂಲಕ ಮೊದಲ ಅವಕಾಶ ಪಡೆದ ಸಾನ್ವಿ ಅದನ್ನು ಯಶಸ್ವಿಯಾಗಿ ಬಳಸಿಕೊಂಡಿದ್ದಾರೆ. ಈ ಹಾಡು ಹಿಟ್ ಆಗಿ, ಇದೀಗ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ಸ್‌ನಲ್ಲಿ ಅತ್ಯುತ್ತಮ ಗಾಯಕಿ ಪ್ರಶಸ್ತಿಯನ್ನು ಪಡೆದಿದ್ದಾರೆ.
ಈ ಹಾಡಿನಲ್ಲಿ ಕಿಚ್ಚ ಸುದೀಪ್ ಮತ್ತು ನಿಶ್ವಿಕಾ ನಾಯ್ಡು ಅವರ ಡ್ಯಾನ್ಸ್ ಕೂಡ ವಿಶೇಷ ಆಕರ್ಷಣೆಯಾಗಿದೆ.ಸಾನ್ವಿ ಸೋಷಿಯಲ್ ಮೀಡಿಯಾದಲ್ಲಿ “A big thank you to Chandanavana Film Critics Awards for ‘Athyuthama Gayaki’” ಎಂದು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. ಪ್ರಶಸ್ತಿ ಸ್ವೀಕರಿಸಿದ ನಂತರ ವೇದಿಕೆಯಲ್ಲಿ ‘ಮಸ್ತ್ ಮಲೈಕಾ’ ಹಾಡಿನ ಕೆಲವು ಸಾಲುಗಳನ್ನು ಹಾಡಿ ಎಲ್ಲರ ಮೆಚ್ಚುಗೆ ಗಳಿಸಿದರು.
ಈ ಸಂದರ್ಭದಲ್ಲಿ ತಾಯಿ ಪ್ರಿಯಾ ಸುದೀಪ್ ಕೂಡ ಉಪಸ್ಥಿತರಿದ್ದು, ಸಾನ್ವಿಯ ಪ್ರತಿಭೆಯನ್ನು ಗುರುತಿಸಿ ಗೌರವಿಸಿದಕ್ಕಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.ಈ ಹಾಡನ್ನು ಗಾಯಕ ನಕಾಶ್ ಅಜೀಜ್ ಜೊತೆಗೂಡಿ ಸಾನ್ವಿ ಹಾಡಿದ್ದು, ಸಂಗೀತವನ್ನು ಅಜನೀಶ್ ಲೋಕನಾಥ್ ನೀಡಿದ್ದಾರೆ. ಮೊದಲ ಹಾಡಿನಲ್ಲೇ ಪ್ರಶಸ್ತಿ ಗೆದ್ದು, ಸಾನ್ವಿ ಸುದೀಪ್ ಸ್ಯಾಂಡಲ್‌ವುಡ್‌ನಲ್ಲಿ ಭರವಸೆಯ ಗಾಯಕಿಯಾಗಿ ಹೊರಹೊಮ್ಮಿದ್ದಾರೆ.