2026-06-08 01:23:18

Matt Henry World Record| ಮ್ಯಾಟ್ ಹೆನ್ರಿ ವಿಶ್ವ ದಾಖಲೆ | Speed News Kannada

Matt Henry World Record| ಮ್ಯಾಟ್ ಹೆನ್ರಿ ವಿಶ್ವ ದಾಖಲೆ | Speed News Kannada

ಅಮರಾವತಿ, ಜನವರಿ 29: ವಿಶಾಖಪಟ್ಟಣದಲ್ಲಿ ನಡೆದ ಭಾರತದ ವಿರುದ್ಧದ 4ನೇ ಟಿ20 ಪಂದ್ಯದ ಮೂಲಕ ನ್ಯೂಝಿಲೆಂಡ್ ವೇಗಿ ಮ್ಯಾಟ್ ಹೆನ್ರಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಮೊದಲ ಓವರ್​ನ ಮೊದಲ ಎಸೆತದಲ್ಲೇ ಅಭಿಷೇಕ್ ಶರ್ಮಾ ವಿಕೆಟ್ ಕಬಳಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ.
ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಸರಣಿಯಲ್ಲಿ ಇಬ್ಬರು ಬ್ಯಾಟರ್​ಗಳನ್ನು ಪಂದ್ಯದ ಮೊದಲ ಎಸೆತದಲ್ಲಿ ಔಟ್ ಮಾಡಿದ ಬೌಲರ್ ಎಂಬ ವಿಶ್ವ ದಾಖಲೆ ಮ್ಯಾಟ್ ಹೆನ್ರಿ ಪಾಲಾಗಿದೆ. ಜನವರಿ 25 ರಂದು ನಡೆದ ಮೂರನೇ ಟಿ20 ಪಂದ್ಯದಲ್ಲಿ ಮ್ಯಾಟ್ ಹೆನ್ರಿ ಸಂಜು ಸ್ಯಾಮ್ಸನ್ ಅವರನ್ನು ಇನಿಂಗ್ಸ್​ನ ಮೊದಲ ಎಸೆತದಲ್ಲೇ ಔಟ್ ಮಾಡಿದ್ದರು.
ಇದೀಗ ನಾಲ್ಕನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅವರನ್ನು ಮೊದಲ ಎಸೆತದಲ್ಲೇ ಔಟ್ ಮಾಡಿ, ಒಂದೇ ಸರಣಿಯಲ್ಲಿ ಇಬ್ಬರು ಆರಂಭಿಕರನ್ನು ಮೊದಲ ಎಸೆತದಲ್ಲೇ ಔಟ್ ಮಾಡಿದ ಐಸಿಸಿ ಪೂರ್ಣ ಸದಸ್ಯ ತಂಡದ ಮೊದಲ ಬೌಲರ್ ಎಂಬ ಹೆಗ್ಗಳಿಕೆಯನ್ನು ಮ್ಯಾಟ್ ಹೆನ್ರಿ ತಮ್ಮದಾಗಿಸಿಕೊಂಡಿದ್ದಾರೆ.
ಇನ್ನು ಈ ಪಂದ್ಯದಲ್ಲಿ  ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ 20 ಓವರ್​ಗಳಲ್ಲಿ 215 ರನ್​ಗಳನ್ನು ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡ ಕೇವಲ 165 ರನ್​ಗಳಿಸಿ ಆಲೌಟ್ ಆಗುವ ಮೂಲಕ 50 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ 4ನೇ ಟಿ20 ಪಂದ್ಯದಲ್ಲಿ ಕಿವೀಸ್ ಪಡೆ 50 ರನ್​ಗಳ ವಿಜಯ ಸಾಧಿಸಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.