2026-04-23 09:23:44

Max Cinema Controversy: Notice to Producers on KRG Petition | ಮ್ಯಾಕ್ಸ್ ಸಿನಿಮಾ ವಿವಾದ: ಕೆಆರ್ಜಿ ಅರ್ಜಿಗೆ ನಿರ್ಮಾಪಕರಿಗೆ ನೊಟೀಸ್ | Speed news kannada

Max Cinema Controversy: Notice to Producers on KRG Petition | ಮ್ಯಾಕ್ಸ್ ಸಿನಿಮಾ ವಿವಾದ: ಕೆಆರ್ಜಿ ಅರ್ಜಿಗೆ ನಿರ್ಮಾಪಕರಿಗೆ ನೊಟೀಸ್ | Speed news kannada

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ನಟನೆಯ ಮ್ಯಾಕ್ಸ್‌ ಸಿನಿಮಾ 2024ರಲ್ಲಿ ಬಿಡುಗಡಡೆಯಾಗಿತ್ತು, ಹಾಗೂ ಸಾಕಷ್ಟು ಜನಪ್ರಿಯತೆ ಕಂಡಿತ್ತು. ಸುದೀಪ್‌ ಅಭಿನಯದ ಸಿನಿಮಾಕ್ಕೆ ತಮಿಳಿನ ನಿರ್ಮಾಪಕ ಕಲೈಪುಲಿ ಎಸ್ ತನು ಮತ್ತು ಕಿಚ್ಚ ಸುದೀಪ್ ಇಬ್ಬರೂ ಬಂಡವಾಳ ಹೂಡಿದ್ದರು. ಸಿನಿಮಾವನ್ನು ವಿತರಣೆ ಮಾಡಿದ್ದು ಕೆಆರ್​​ಜಿ ಸ್ಟುಡಿಯೋಸ್. ಆದರೆ ಸಿನಿಮಾ ಬಿಡುಗಡೆ ಆದ ಬಳಿಕ ನಿರ್ಮಾಪಕರು ಮತ್ತು ಕೆಆರ್​​ಜಿ ನಡುವೆ ಹಣಕಾಸಿಗೆ ಸಂಬಂಧಿಸಿದಂತೆ ವಿವಾದ ಭುಗಿಲೆದ್ದಿದ್ದು, ನಿರ್ಮಾಪಕ ಕಲೈಪುಲಿ ತನು ಅವರು ಕೆಆರ್​​​ಜಿ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್​​ಜಿ ಮನವಿ ಮೇರೆಗೆ ಸಿನಿಮಾದ ನಿರ್ಮಾಪಕರಿಗೆ ಮದ್ರಾಸ್ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ.

ಕೆಆರ್‌ಜಿ ಸ್ಟುಡಿಯೋಸ್ ಚಿತ್ರದ ಆದಾಯ ಮತ್ತು ವೆಚ್ಚದ ಸರಿಯಾದ ಲೆಕ್ಕಪತ್ರಗಳನ್ನು ನೀಡಿಲ್ಲ ಮತ್ತು ತಮಗೆ ಬರಬೇಕಾದ ಬಾಕಿ ಹಣವನ್ನು ಪಾವತಿಸಿಲ್ಲ ಎಂದು ಆರೋಪಿಸಿ ತನು ಅವರು ಮದ್ರಾಸ್ ಹೈಕೋರ್ಟ್‌ನಲ್ಲಿ ಸಿವಿಲ್ ಮೊಕದ್ದಮೆ ಹೂಡಿದ್ದರು. ಅಲ್ಲದೆ, 18% ಬಡ್ಡಿಯೊಂದಿಗೆ ಬಾಕಿ ಹಣ ಮತ್ತು 1 ಕೋಟಿ ರೂ. ನಷ್ಟಪರಿಹಾರಕ್ಕೂ ಬೇಡಿಕೆ ಇಟ್ಟಿದ್ದರು. ಚಿತ್ರವು ಪ್ರಮುಖವಾಗಿ ಕನ್ನಡ ಭಾಷೆಯದ್ದಾಗಿದೆ. ಒಪ್ಪಂದದ ಪ್ರಕಾರ ಯಾವುದೇ ವಿವಾದವಿದ್ದರೂ ಅದು ಬೆಂಗಳೂರಿನ ನ್ಯಾಯಾಲಯಗಳ ವ್ಯಾಪ್ತಿಗೆ ಬರಬೇಕು ಎಂದು ಕೆಆರ್​ಜಿ ಒತ್ತಾಯಿಸಿದೆ. ವಿಚಾರಣೆಯ ಸಂದರ್ಭದಲ್ಲಿ ಒಂದು ಕುತೂಹಲಕಾರಿ ಅಂಶ ಬೆಳಕಿಗೆ ಬಂದಿದೆ. ಒಪ್ಪಂದ ಪತ್ರದಲ್ಲಿ ಬೆಂಗಳೂರು ಎಂಬ ಪದವನ್ನು ಹೊಡೆದುಹಾಕಿ ಚೆನ್ನೈ ಎಂದು ಬರೆಯಾಗಿದೆ. ಈ ಬದಲಾವಣೆ ಮಾಡಿರುವ ಬಗ್ಗೆ ಕೆಆರ್‌ಜಿ ಸ್ಟುಡಿಯೋಸ್‌ ವಾದಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಕಲೈಪುಲಿ ಅವರಿಗೆ ನೊಟೀಸ್‌ ನೀಡಲಾಗಿದೆ. ಮುಂದಿನ ವಿಚಾರಣೆಯನ್ನು ಏಪ್ರಿಲ್‌ 6ಕ್ಕೆ ನಿಗದಿಪಡಿಸಲಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.