ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು ಮತ್ತು ಪುದುಚೇರಿ ವಿಧಾನಸಭಾ ಚುನಾವಣಾ ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿ ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಸಿಗಲಿದೆ.ಪಶ್ಚಿಮ ಬಂಗಾಳದಲ್ಲಿ ಮಮತ ಬ್ಯಾನರ್ಜಿ ಅವರಿಗೆ ಅಗ್ನಿಪರೀಕ್ಷೆಯಾಗಿದ್ದು, ತಮಿಳುನಾಡು ಮತ್ತು ಕೇರಳದಲ್ಲೂ ಕಠಿಣ ಪೈಪೋಟಿ ಕಾಣಿಸಿಕೊಂಡಿದೆ. ಅಸ್ಸಾಂನಲ್ಲಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಬಿಜೆಪಿ ತನ್ನ ಬಲವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ.ಪುದುಚೇರಿಯಲ್ಲಿ ಎನ್‌ಡಿಎಗೆ ಮುನ್ನಡೆ ಸಿಗುವ ಸಾಧ್ಯತೆ ಇದೆ ಎಂದು ಎಕ್ಸಿಟ್ ಪೋಲ್ ಸೂಚಿಸಿದೆ.ಮತ ಎಣಿಕೆ ಪ್ರಕ್ರಿಯೆ ಅಂಚೆ ಮತಪತ್ರಗಳಿಂದ ಆರಂಭವಾಗಿ ನಂತರ ಇವಿಎಂ ಮತಗಳ ಎಣಿಕೆ ನಡೆಯಲಿದೆ.