2026-07-23 06:17:00

May 4th is the day when political destiny will be decided|ಮೇ 4ಕ್ಕೆ ರಾಜಕೀಯ ಭವಿಷ್ಯ ತೀರ್ಮಾನಿಸುವ ದಿನ|Speed News Kannada

May 4th is the day when political destiny will be decided|ಮೇ 4ಕ್ಕೆ ರಾಜಕೀಯ ಭವಿಷ್ಯ ತೀರ್ಮಾನಿಸುವ ದಿನ|Speed News Kannada

ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು ಮತ್ತು ಪುದುಚೇರಿ ವಿಧಾನಸಭಾ ಚುನಾವಣಾ ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿ ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಸಿಗಲಿದೆ.ಪಶ್ಚಿಮ ಬಂಗಾಳದಲ್ಲಿ ಮಮತ ಬ್ಯಾನರ್ಜಿ ಅವರಿಗೆ ಅಗ್ನಿಪರೀಕ್ಷೆಯಾಗಿದ್ದು, ತಮಿಳುನಾಡು ಮತ್ತು ಕೇರಳದಲ್ಲೂ ಕಠಿಣ ಪೈಪೋಟಿ ಕಾಣಿಸಿಕೊಂಡಿದೆ. ಅಸ್ಸಾಂನಲ್ಲಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಬಿಜೆಪಿ ತನ್ನ ಬಲವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ.ಪುದುಚೇರಿಯಲ್ಲಿ ಎನ್‌ಡಿಎಗೆ ಮುನ್ನಡೆ ಸಿಗುವ ಸಾಧ್ಯತೆ ಇದೆ ಎಂದು ಎಕ್ಸಿಟ್ ಪೋಲ್ ಸೂಚಿಸಿದೆ.ಮತ ಎಣಿಕೆ ಪ್ರಕ್ರಿಯೆ ಅಂಚೆ ಮತಪತ್ರಗಳಿಂದ ಆರಂಭವಾಗಿ ನಂತರ ಇವಿಎಂ ಮತಗಳ ಎಣಿಕೆ ನಡೆಯಲಿದೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.