2026-03-07 06:11:40

Mega Power Star Ram Charans Peddi Movie Release Announcement | ಮೆಗಾ ಪವರ್ ಸ್ಟಾರ್ ರಾಮ್ ಚರಣ್ ನಟನೆಯ ಪೆದ್ದಿ ಸಿನಿಮಾದ ಬಿಡುಗಡೆ ಘೋಷಣೆ | Speed News Kannada

Mega Power Star Ram Charans Peddi Movie Release Announcement | ಮೆಗಾ ಪವರ್ ಸ್ಟಾರ್ ರಾಮ್ ಚರಣ್ ನಟನೆಯ ಪೆದ್ದಿ ಸಿನಿಮಾದ ಬಿಡುಗಡೆ ಘೋಷಣೆ | Speed News Kannada

ಎಪ್ರಿಲ್ 30ಕ್ಕೆ ರಾಮ್ ಚರಣ್ ನಟನೆಯ ಪೆದ್ದಿ ತೆರೆಗೆ ಎಂಟ್ರಿ
ಗ್ಲೋಬಲ್ ಸ್ಟಾರ್ ರಾಮ್‌ ಚರಣ್ ತೇಜಾ ನಟಿಸುತ್ತಿರುವ 'ಪೆದ್ದಿ' ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ. ಬುಚ್ಚಿ ಬಾಬು ಸನಾ ಆಕ್ಷನ್ ಕಟ್ ಹೇಳಿರುವ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಮಾರ್ಚ್ 27ರಂದು ರಿಲೀಸ್ ಆಗಬೇಕಿದ್ದ ಪೆದ್ದಿ ಸಿನಿಮಾ ಏಪ್ರಿಲ್ 30ಕ್ಕೆ ವಿಶ್ವಾದ್ಯಂತ ಥಿಯೇಟರ್ ಗೆ ಲಗ್ಗೆ ಇಡಲಿದೆ.

ರಾಮ್ ಚರಣ್ ನಟಿಸುತ್ತಿರುವ 'ಪೆದ್ದಿ' ಸಿನಿಮಾದಲ್ಲಿ ದೊಡ್ಡ ತಾರಾಗಣವೇ ಇದೆ. ನಾಯಕಿಯಾಗಿ ಜಾಹ್ನವಿ ಕಪೂರ್ ಅಭಿನಯಿಸಿದ್ದಾರೆ.‌ಈ ಸಿನಿಮಾದಲ್ಲಿ ಮತ್ತೊಂದು ಇಂಟ್ರೆಸ್ಟಿಂಗ್ ಪಾತ್ರ ಅಂದರೆ, ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್‌ ಒಂದು ಖಡಕ್ ರೋಲ್ ಕಾಣಿಸಿಕೊಳ್ಳುತ್ತಿದ್ದಾರೆ.‌ ಇವರೆಲ್ಲರ ಹೊರತಾಗಿ ಜಗಪತಿ ಬಾಬು, ದಿವೇಂದು ಶರ್ಮಾ ಇವರಿಬ್ಬರೂ ಸೇರಿದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಪೆದ್ದಿ ಸ್ಫೋರ್ಟ್ ಆಕ್ಷನ್ ಡ್ರಾಮಾ ಆಗಿದೆ. ಈ ಸಿನಿಮಾ ಎಆರ್ ರೆಹಮಾನ್ ಸಂಗೀತ ನಿರ್ದೇಶನ ಮಾಡುತ್ತಿದ್ದು, ವೃದ್ಧಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿಲಾರು ನಿರ್ಮಾಣ ಮಾಡುತ್ತಿದ್ದಾರೆ. ಮೈತ್ರಿ ಮೂವೀ ಮೇಕರ್ಸ್ ಮತ್ತು ಸುಕುಮಾರ್ ರೈಟಿಂಗ್ಸ್ ಬ್ಯಾನರ್‌ಗಳು ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದ್ದಾರೆ. ಆರ್. ರತ್ನವೇಲು ಛಾಯಾಗ್ರಹಣ ಮಾಡುತ್ತಿದ್ದು,‌ನವೀನ್ ನೂಲಿ ಸಂಕಲನ ಚಿತ್ರಕ್ಕಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.