2026-05-27 01:10:23

ಮೇಕೆದಾಟು ಯೋಜನೆ: ರಾಜ್ಯಕ್ಕೆ ಸಿಹಿ ಸುದ್ದಿ ನೀಡಿದ ಡಿಕೆ ಶಿವಕುಮಾರ್; ಏನದು?| Speed News Kannada

ಮೇಕೆದಾಟು ಯೋಜನೆ: ರಾಜ್ಯಕ್ಕೆ ಸಿಹಿ ಸುದ್ದಿ ನೀಡಿದ ಡಿಕೆ ಶಿವಕುಮಾರ್; ಏನದು?| Speed News Kannada

ನವದೆಹಲಿ; ರಾಜ್ಯ ರಾಜಕಾರಣದ ಬಿಕ್ಕಟ್ಟಿನ ನಡುವೆಯೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ರಾಜ್ಯದ ಜನತಗೆ ಸಿಹಿ ಸುದ್ದಿಯೊಂದನ್ನು ಕೊಟ್ಟಿದ್ದಾರೆ.  

ಮೇಕೆದಾಟು ಯೋಜನೆಗೆ ಸಂಬಂಧಪಟ್ಟಂತೆ ತಮಿಳುನಾಡು ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ವಜಾಗೊಳಿಸಿದೆ. ಇದು ಕರ್ನಾಟಕ ಪಾಲಿಗೆ ಶುಭಸುದ್ದಿ. ಕರ್ನಾಟಕ ರಾಜ್ಯದ ಜನರ ಪರವಾಗಿ ನಾವು ಸುಪ್ರೀಂ ಕೋರ್ಟಿಗೆ ಧನ್ಯವಾದ ಅರ್ಪಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು ಈ ಶುಭ ಸುದ್ದಿ ನೀಡಿದರು.

ತಮಿಳುನಾಡಿನ ಪಾಲಿನ 177 ಟಿಎಂಸಿ ನೀರನ್ನು ಹರಿಸಬೇಕು ಎಂದು ಸುಪ್ರೀಂ ಕೋರ್ಟ್ ಈ ಹಿಂದಿನ ಆದೇಶದಲ್ಲೇ ಷರತ್ತು ವಿಧಿಸಿದೆ. ಆ ಪ್ರಕಾರ ರಾಜ್ಯ ನಡೆದುಕೊಳ್ಳುತ್ತಿದೆ. ಈಗ ಈ ಯೋಜನೆ ಕುರಿತು ತೀರ್ಮಾನ ಮಾಡಬೇಕಿರುವುದು ಕೇಂದ್ರ ಸರ್ಕಾರ. ಕೇಂದ್ರಕ್ಕೆ  ಪರಿಷ್ಕೃತ ಡಿಪಿಆರ್ ಸಲ್ಲಿಕೆಗೆ ಸಿದ್ದತೆ ಮಾಡಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.