2026-03-07 01:43:54

Metro Ticket Price Hike Is Not Right | ಮೆಟ್ರೋ ಟಿಕೆಟ್ ದರ ಏರಿಕೆ ಸರಿಯಲ್ಲ ಛಲವಾದಿ ನಾರಾಯಣ ಸ್ವಾಮಿ ಖಂಡನೆ | Speed News kannada

Metro Ticket Price Hike Is Not Right | ಮೆಟ್ರೋ ಟಿಕೆಟ್ ದರ ಏರಿಕೆ ಸರಿಯಲ್ಲ ಛಲವಾದಿ ನಾರಾಯಣ ಸ್ವಾಮಿ ಖಂಡನೆ | Speed News kannada

ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ನಾಯಕ ಛಲವಾದಿ ನಾರಾಯಣ ಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಜಾರಿಗೆ ಬಂದಿರುವ ನೂತನ ದರ ಪರಿಷ್ಕರಣೆ ಸಾಮಾನ್ಯ ಪ್ರಯಾಣಿಕರ ಮೇಲೆ ಭಾರೀ ಹೊರೆ ಬೀರುತ್ತಿದ್ದು, ಇದು ಸರಿಯಾದ ನಿರ್ಧಾರವಲ್ಲ ಎಂದು ಅವರು ಹೇಳಿದ್ದಾರೆ.
ಇತ್ತೀಚಿನ ದರ ಪರಿಷ್ಕರಣೆಯಲ್ಲಿ ಬೆಂಗಳೂರು ಮೆಟ್ರೋ ಗರಿಷ್ಠ ಟಿಕೆಟ್ ದರವನ್ನು ₹60 ರಿಂದ ₹90ಕ್ಕೆ ಏರಿಸಲಾಗಿದೆ. ಇದು ಸುಮಾರು 50% ವರೆಗೆ ಏರಿಕೆಯಾಗಿದೆ. ಈ ದರ ಪರಿಷ್ಕರಣೆ ಫೇರ್ ಫಿಕ್ಸೇಶನ್ ಕಮಿಟಿ (Fare Fixation Committee) ಶಿಫಾರಸಿನ ಆಧಾರದ ಮೇಲೆ ಜಾರಿಗೆ ಬಂದಿದ್ದು, ಈ ಸಮಿತಿ ರಾಜ್ಯ ಸರ್ಕಾರದ ಅಧೀನದಲ್ಲೇ ಕಾರ್ಯನಿರ್ವಹಿಸುತ್ತದೆ. ಮೆಟ್ರೋ ಟಿಕೆಟ್ ದರ ಪರಿಷ್ಕರಣೆ ರಾಜ್ಯ ಸರ್ಕಾರದ ಅನುಮತಿ ಮತ್ತು ಪ್ರಕ್ರಿಯೆಗಳಿಲ್ಲದೇ ನಡೆಯಲು ಸಾಧ್ಯವಿಲ್ಲ ಎಂದು ಛಲವಾದಿ ನಾರಾಯಣ ಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರ ಇಲ್ಲ ಎಂದು ಅವರು ಹೇಳಿದ್ದಾರೆ. 

ಮೆಟ್ರೋ ನಷ್ಟದಲ್ಲಿದೆ ಎಂಬ ಕಾರಣ ನೀಡಿ ದರ ಏರಿಕೆ ಮಾಡಲಾಗಿದೆಯೇ ಎಂಬುದನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು ಎಂದು  ಆಗ್ರಹಿಸಿದ್ದಾರೆ. ಬಿಎಂಆರ್‌ಸಿಎಲ್ (BMRCL) ಕಳೆದ ಕೆಲವು ವರ್ಷಗಳಿಂದ ನಷ್ಟದಲ್ಲಿದ್ದು, ಕಾರ್ಯಾಚರಣಾ ವೆಚ್ಚ, ವಿದ್ಯುತ್ ದರ, ನಿರ್ವಹಣಾ ಖರ್ಚು ಮತ್ತು ಸಾಲದ ಬಡ್ಡಿ ಕಾರಣದಿಂದ ಆರ್ಥಿಕ ಒತ್ತಡದಲ್ಲಿದೆ ಎಂಬ ಮಾಹಿತಿ ಇದೆ. ಈ ಹಿನ್ನೆಲೆ ದರ ಏರಿಕೆ ಪ್ರಸ್ತಾಪ ಯಾರ ಕಡೆಯಿಂದ ಬಂದಿದೆ ಎಂಬುದನ್ನು ರಾಜ್ಯ ಸರ್ಕಾರ ಬಹಿರಂಗಪಡಿಸಬೇಕು ಎಂದು ಛಲವಾದಿ ನಾರಾಯಣ ಸ್ವಾಮಿ ಒತ್ತಾಯಿಸಿದ್ದಾರೆ.

ಇತ್ತೀಚಿನ ದರ ಏರಿಕೆ ಬಳಿಕ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿದೆ. ಪ್ರಯಾಣಿಕರ ಒತ್ತಡದ ಹಿನ್ನೆಲೆಯಲ್ಲಿ ಕೆಲವು ರೂಟ್‌ಗಳಲ್ಲಿ ದರವನ್ನು 30% ವರೆಗೆ ಕಡಿಮೆ ಮಾಡುವ ತಿದ್ದುಪಡಿ ಕೂಡ ಮಾಡಲಾಗಿದೆ. ಆದರೆ, ಸಂಪೂರ್ಣ ದರ ಏರಿಕೆ ಹಿಂಪಡೆಯಲಾಗಿಲ್ಲ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ದರ ಪರಿಷ್ಕರಣೆ ಸಮಿತಿ ಒಟ್ಟಾಗಿ ಕೆಲಸ ಮಾಡಿ, ಪ್ರಯಾಣಿಕರಿಗೆ ನ್ಯಾಯ ಒದಗಿಸಬೇಕು ಎಂದು ಛಲವಾದಿ ನಾರಾಯಣ ಸ್ವಾಮಿ ಆಗ್ರಹಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.