2026-03-07 06:06:17

Military conflicts are not the solution to any problem | ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷಗಳು ಪರಿಹಾರವಲ್ಲ ಪ್ರಧಾನಿ ಮೋದಿ | Speed News Kannada

Military conflicts are not the solution to any problem | ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷಗಳು ಪರಿಹಾರವಲ್ಲ ಪ್ರಧಾನಿ ಮೋದಿ | Speed News Kannada

ನವದೆಹಲಿ: ಜಗತ್ತಿನ ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷಗಳು ಪರಿಹಾರವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.
ಫಿನ್‌ ಲ್ಯಾಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರ ಜತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೋದಿ, ಮಿಲಿಟರಿ ಕಾರ್ಯಾಚರಣೆಗಳ ಬದಲಿಗೆ ರಾಜತಾಂತ್ರಿಕತೆಯ ಮೂಲಕ ಸಂಘರ್ಷಗಳನ್ನು ಪರಿಹರಿಸಬೇಕು ಎಂದು ಅಭಿಪ್ರಾಯಪಟ್ಟರು.
ಭಾರತ ಮತ್ತು ಫಿನ್‌ ಲ್ಯಾಂಡ್ ಎರಡೂ ದೇಶಗಳು ಮಿಲಿಟರಿ ಸಂಘರ್ಷದ ಮೂಲಕ ಮಾತ್ರ ಯಾವುದೇ ಸಮಸ್ಯೆಯನ್ನು ಪರಿಹರಿಸಲಾಗುವುದಿಲ್ಲ ಎನ್ನುವುದನ್ನು ಒಪ್ಪಿಕೊಳ್ಳುತ್ತೇವೆ. ಉಕ್ರೇನ್, ಪಶ್ಚಿಮ ಏಷ್ಯಾವಾ ಸೇರಿದಂತೆ ಯಾವುದೇ ಭಾಗದ ಸಂಘರ್ಷದ ತ್ವರಿತ ಅಂತ್ಯಕ್ಕಾಗಿ ನಾವು ಎಲ್ಲಾ ಪ್ರಯತ್ನಗಳನ್ನು ಬೆಂಬಲಿಸುವುದನ್ನು ಮುಂದುವರಿಸುತ್ತೇವೆ ಎಂದು ತಿಳಿಸಿದರು.   
AI ನಿಂದ 6G ಟೆಲಿಕಾಂ ವರೆಗೆ, ಶುದ್ಧ ಇಂಧನದಿಂದ ಕ್ವಾಂಟಮ್ ಕಂಪ್ಯೂಟಿಂಗ್‌ವರೆಗೆ ಈ ಪಾಲುದಾರಿಕೆಯು ಅನೇಕ ಹೈಟೆಕ್ ಕ್ಷೇತ್ರಗಳಲ್ಲಿ ನಮ್ಮ ಸಹಕಾರಕ್ಕೆ ವೇಗ ಮತ್ತು ಶಕ್ತಿಯನ್ನು ನೀಡುತ್ತದೆ
ರತ-ಯುರೋಪಿಯನ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದವು ಭಾರತ ಮತ್ತು ಫಿನ್ಲ್ಯಾಂಡ್ ನಡುವಿನ ವ್ಯಾಪಾರ ಸಂಬಂಧಗಳನ್ನು ಬಲಪಡಿಸುತ್ತದೆ ಎಂದು ಮೋದಿ ಹೇಳಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.