ಬೆಂಗಳೂರು: ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ನಮ್ಮ ರಾಷ್ಟ್ರೀಯ ನಾಯಕರು. ಅವರಿಗೆ ಇಲ್ಲಿಂದಲೇ ನಮಸ್ಕಾರ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಮಹದೇವಪ್ಪ ಅವರು ದಲಿತ ಮುಖ್ಯಮಂತ್ರಿ ವಿಷಯವನ್ನು ಮುನ್ನೆಲೆಗೆ ತಂದಿರುವ ಬಗ್ಗೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು, ಮಹದೇವಪ್ಪ ಅವರು ನಮ್ಮ ರಾಷ್ಟ್ರೀಯ ನಾಯಕರು. ಅವರಿಗೆ ಇಲ್ಲಿಂದಲೇ ನಮಸ್ಕಾರ ಎಂದರು.
ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾತನಾಡಿ, ದಲಿತರನ್ನು ಮುಖ್ಯಮಂತ್ರಿ ಮಾಡುವುದು ಕಾಂಗ್ರೆಸ್ ಪಕ್ಷ ಮಾತ್ರ. ಬೇರೆ ಯಾವುದೇ ಪಕ್ಷ ಮಾಡುವುದಿಲ್ಲ. ಆದರೆ ಯಾವಾಗ ದಲಿತ ಸಿಎಂ ಮಾಡಬೇಕೆಂದು ವರಿಷ್ಠರು ತೀರ್ಮಾನಿಸ್ತಾರೆ ಎಂದಿದ್ದಾರೆ.
ಸಚಿವ ಎಂ. ವೆಂಕಟೇಶ್ ಪ್ರತಿಕ್ರಿಯೆ ನೀಡಿ ಸಿಎಂಗಿರಿಗೆ ಪಟ್ಟಿನ ಮಧ್ಯೆ ದಲಿತ ಸಿಎಂ ಕೂಗು ವಿಚಾರ. ಸಚಿವ ಹೆಚ್.ಸಿ.ಮಹದೇವಪ್ಪ ಮುಖ್ಯಮಂತ್ರಿ ಆದರೆ ನನಗೆ ಖುಷಿಯಾಗುತ್ತದೆ. ಅವರು ನನ್ನ ಆಪ್ತರು ಎಂದು ತಿಳಿಸಿದ್ದಾರೆ.
ಆದರೆ, ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. ದಲಿತ ಸಿಎಂ ಕೂಗು ಇದೆಯೋ, ಇಲ್ವೋ ನನಗೆ ಗೊತ್ತಿಲ್ಲ ಎಂದಿದ್ದಾರೆ.