2026-03-07 06:45:43

Minister for the post of Chief Minister Dr H C Mahadevappa | ಮುಖ್ಯಮಂತ್ರಿ ಪಟ್ಟಕ್ಕೆ ಸಚಿವ ಡಾ ಎಚ್ ಸಿ ಮಹದೇವಪ್ಪ ಯಾರು ಏನಂದ್ರು | Speed News Kannada

Minister for the post of Chief Minister Dr H C Mahadevappa | ಮುಖ್ಯಮಂತ್ರಿ ಪಟ್ಟಕ್ಕೆ ಸಚಿವ ಡಾ ಎಚ್ ಸಿ ಮಹದೇವಪ್ಪ ಯಾರು ಏನಂದ್ರು | Speed News Kannada

ಬೆಂಗಳೂರು: ಸಮಾಜ ಕಲ್ಯಾಣ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಅವರು ನಮ್ಮ ರಾಷ್ಟ್ರೀಯ ನಾಯಕರು. ಅವರಿಗೆ ಇಲ್ಲಿಂದಲೇ ನಮಸ್ಕಾರ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಮಹದೇವಪ್ಪ ಅವರು  ದಲಿತ ಮುಖ್ಯಮಂತ್ರಿ ವಿಷಯವನ್ನು ಮುನ್ನೆಲೆಗೆ ತಂದಿರುವ ಬಗ್ಗೆ  ಪ್ರತಿಕ್ರಿಯಿಸಿದ ಶಿವಕುಮಾರ್‌ ಅವರು, ಮಹದೇವಪ್ಪ ಅವರು ನಮ್ಮ ರಾಷ್ಟ್ರೀಯ ನಾಯಕರು. ಅವರಿಗೆ ಇಲ್ಲಿಂದಲೇ ನಮಸ್ಕಾರ ಎಂದರು.
ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಮಾತನಾಡಿ, ದಲಿತರನ್ನು ಮುಖ್ಯಮಂತ್ರಿ ಮಾಡುವುದು ಕಾಂಗ್ರೆಸ್ ಪಕ್ಷ ಮಾತ್ರ. ಬೇರೆ ಯಾವುದೇ ಪಕ್ಷ ಮಾಡುವುದಿಲ್ಲ. ಆದರೆ ಯಾವಾಗ ದಲಿತ ಸಿಎಂ ಮಾಡಬೇಕೆಂದು ವರಿಷ್ಠರು ತೀರ್ಮಾನಿಸ್ತಾರೆ ಎಂದಿದ್ದಾರೆ.
ಸಚಿವ ಎಂ. ವೆಂಕಟೇಶ್‌ ಪ್ರತಿಕ್ರಿಯೆ ನೀಡಿ ಸಿಎಂಗಿರಿಗೆ ಪಟ್ಟಿನ ಮಧ್ಯೆ ದಲಿತ ಸಿಎಂ ಕೂಗು ವಿಚಾರ. ಸಚಿವ ಹೆಚ್.ಸಿ.ಮಹದೇವಪ್ಪ ಮುಖ್ಯಮಂತ್ರಿ ಆದರೆ ನನಗೆ ಖುಷಿಯಾಗುತ್ತದೆ. ಅವರು ನನ್ನ ಆಪ್ತರು ಎಂದು ತಿಳಿಸಿದ್ದಾರೆ.
ಆದರೆ, ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. ದಲಿತ ಸಿಎಂ ಕೂಗು ಇದೆಯೋ, ಇಲ್ವೋ ನನಗೆ ಗೊತ್ತಿಲ್ಲ ಎಂದಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.