2026-03-07 04:06:07

Minister K J George | ರೈತರಿಗೆ ಹಗಲು 7 ಗಂಟೆ ವಿದ್ಯುತ್ ಪೂರೈಸಲು ಬದ್ಧ ಸಚಿವ ಕೆ ಜೆ ಜಾರ್ಜ್ | Speed News Kannada

Minister K J George | ರೈತರಿಗೆ ಹಗಲು 7 ಗಂಟೆ ವಿದ್ಯುತ್ ಪೂರೈಸಲು ಬದ್ಧ ಸಚಿವ ಕೆ ಜೆ ಜಾರ್ಜ್ | Speed News Kannada

ಬೆಂಗಳೂರು: ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವೇಳೆ ನಿರಂತರ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಬದ್ಧವಾಗಿದ್ದು, ಅದಕ್ಕಾಗಿ ಕುಸುಮ-ಸಿ ಯೋಜನೆಯಡಿ ಕೃಷಿ ಫೀಡರ್ ಗಳ ಸೌರೀಕರಣ ಕಾರ್ಯವನ್ನು ತ್ವರಿತಗೊಳಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಪ್ರದೇಶ ಕಾಂಗ್ರೆಸ್ ಕಚೇರಿಗೆ ಶುಕ್ರವಾರ ಭೇಟಿ ನೀಡಿ ಮುಖಂಡರು ಮತ್ತು ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, "ಕುಸುಮ್-ಸಿ ಯೋಜನೆ ಮೂಲಕ ಕೃಷಿಗೆ ವಿದ್ಯುತ್ ಒದಗಿಸುವ ಉಪ ಕೇಂದ್ರಗಳನ್ನು ಸೌರೀಕರಣಗೊಳಿಸಿ 2500 ಮೆಗಾವ್ಯಾಟ್ ಸೌರ ವಿದ್ಯುತ್ ಉತ್ಪಾದಿಸುವ ಗುರಿಯೊಂದಿಗೆ ರೈತರಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ನೀಡಲು ಕ್ರಮ ವಹಿಸಲಾಗುತ್ತಿದೆ. ದೇಶದಲ್ಲೇ ಅತಿ ಹೆಚ್ಚು ಅದರೆ ಶೇ. 80 ರಷ್ಟು ಸಬ್ಸಿಡಿಯೊಂದಿಗೆ ಕುಸುಮ್- ಬಿ ಯೋಜನೆಯಡಿ ಸೋಲಾರ್ ಪಂಪ್‌ಸೆಟ್ ಒದಗಿಸುತ್ತಿದ್ದೇವೆ. ಇದು ಕೃಷಿ ಕ್ಷೇತ್ರಕ್ಕೆ ಇಂಧನ ಇಲಾಖೆಯ ಕ್ರಾಂತಿಕಾರಕ ಹೆಜ್ಜೆಯಾಗಿದೆ," ಎಂದು ತಿಳಿಸಿದರು. 
"ನಾಡಿನ ಜನರಿಗೆ ಹಾಗೂ ರೈತರರಿಗೆ ವಿದ್ಯುತ್ ನೀಡುವ ಮೂಲಕ ಇಂಧನ ಇಲಾಖೆ ರಾಜ್ಯದ ಪ್ರಗತಿಗೆ ಮಹತ್ತರ ಕೊಡುಗೆ ನೀಡುತ್ತಿದೆ. ಗೃಹಜ್ಯೋತಿ ಯೋಜನೆಯಡಿ ಗೃಹ ಬಳಕೆದಾರರಿಗೆ 200 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡುತ್ತಿದ್ದು 1.65 ಕೋಟಿ ಕುಟುಂಬಗಳಿಗೆ ಬೆಳಕಾಗಿದೆ. ಇಂಧನ ಇಲಾಖೆ ಇರುವ ಸದವಕಾಶಗಳನ್ನು ಬಳಸಿಕೊಂಡು ನಾಡಿನ ಜನರ ಮುಖ್ಯವಾಗಿ ರೈತರ ಏಳಿಗೆಗೆ ಶ್ರಮಿಸುತ್ತಿದೆ," ಎಂದರು.
"ಸೌರಶಕ್ತಿಯನ್ನು ಕೃಷಿ ಚಟುವಟಿಕೆಗಳಿಗೆ ಸಂಯೋಜಿಸುವ ಮೂಲಕ ವಿದ್ಯುತ್ ಪರಿವರ್ತಕಗಳ ಮೇಲೆ ಬೀಳುತ್ತಿದ್ದ ಒತ್ತಡ ಹಾಗೂ ವಿದ್ಯುತ್ ಕಳ್ಳತನಗಳಿಗೆ ಕಡಿವಾಣ ಹಾಕಲಾಗುತ್ತಿದೆ. ವಿದ್ಯುತ್ ಉತ್ಪಾದನೆಯಲ್ಲಿ ಪಗ್ರತಿ ಸಾಧಿಸಿದ್ದು, ವಿಶ್ವಾಸಾರ್ಹ ಪ್ರಸರಣವನ್ನು ಕಾಯ್ದುಕೊಂಡಿದ್ದೇವೆ," ಎಂದು ಹೇಳಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.