2026-03-07 08:08:45

Minister Kumaraswamy | Nirmala Sitharaman | ಉಕ್ಕು ವಲಯದ ಬೆಳವಣಿಗೆ ಹೂಡಿಕೆ ಸಚಿವೆ ನಿರ್ಮಲಾ ಸೀತಾರಾಮನ್ ಜತೆ ಸಚಿವ ಕುಮಾರಸ್ವಾಮಿ ಚರ್ಚೆ | Speed News Kannada

Minister Kumaraswamy | Nirmala Sitharaman | ಉಕ್ಕು ವಲಯದ ಬೆಳವಣಿಗೆ ಹೂಡಿಕೆ ಸಚಿವೆ ನಿರ್ಮಲಾ ಸೀತಾರಾಮನ್ ಜತೆ ಸಚಿವ ಕುಮಾರಸ್ವಾಮಿ ಚರ್ಚೆ | Speed News Kannada

ನವದೆಹಲಿ: ಉಕ್ಕು ಸಚಿವಾಲಯದ ವಿವಿಧ ಅಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಉಕ್ಕು ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಸಂಸತ್ತಿನಲ್ಲಿ ಕೇಂದ್ರದ ಹಣಕಾಸು ಸಚಿವರ ಕಚೇರಿಯಲ್ಲಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ ಅವರು, ಪ್ರಮುಖ ಅಭಿವೃದ್ಧಿ ಆದ್ಯತೆಗಳ ಕುರಿತು ವಿವರವಾದ ಚರ್ಚೆಗಳನ್ನು ನಡೆಸಿದರು.
ಉಕ್ಕು ಸಚಿವಾಲಯದ ಹೊಸ ಹೂಡಿಕೆಗಳು ಮತ್ತು ಈಗಾಗಲೇ ನಡೆಯುತ್ತಿರುವ ಯೋಜನೆಗಳನ್ನು ಬಗ್ಗೆ ಹಾಗೂ ಉಕ್ಕು ವಲಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಾನ್ಯ ಸಚಿವರ ಜತೆ ಸಮಾಲೋಚನೆ ನಡೆಸಲಾಯಿತು ಎಂದು ಸಚಿವ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಸುಸ್ಥಿರ ಬೆಳವಣಿಗೆಯನ್ನು ಉತ್ತೇಜಿಸುವ ಮತ್ತು ವಿಕಸಿತ ಭಾರತ-2047 ದೃಷ್ಟಿಕೋನವನ್ನು ಮುನ್ನಡೆಸುವ ಭವಿಷ್ಯತ್ತಿನ ಕೇಂದ್ರದ ಆಯವ್ಯಯವನ್ನು ಮಂಡಿಸಿದ್ದಕ್ಕಾಗಿ ಹಣಕಾಸು ಸಚಿವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ ಎಂದು ಸಚಿವರು ಹೇಳಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.