2026-05-02 11:53:48

Minister Mahadevappa important visit to Delhi |ದೆಹಲಿಯಲ್ಲಿ ಸಚಿವ ಮಹದೇವಪ್ಪ ಮಹತ್ವದ ಭೇಟಿ|Speed News Kannada

Minister Mahadevappa important visit to Delhi |ದೆಹಲಿಯಲ್ಲಿ ಸಚಿವ ಮಹದೇವಪ್ಪ ಮಹತ್ವದ ಭೇಟಿ|Speed News Kannada

ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ದೆಹಲಿಯಲ್ಲಿ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷ ಕಿಶೋರ್ ಮಕ್ವಾನ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಜಾರಿಗೊಳಿಸಲಾದ 'ಒಳ ಮೀಸಲಾತಿ' ನಿರ್ಧಾರದ ಬಗ್ಗೆ ಮಾಹಿತಿ ನೀಡಿದ ಸಚಿವರಿಗೆ, ಆಯೋಗದ ಅಧ್ಯಕ್ಷರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಇತರೆ ರಾಜ್ಯಗಳೂ ಕರ್ನಾಟಕದ ಮಾದರಿಯನ್ನು ಅನುಸರಿಸಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.

ಈ ಭೇಟಿಯ ನಂತರ, ಸಂಸದ ಸುನಿಲ್ ಬೋಸ್ ನಿವಾಸದಲ್ಲಿ ನಡೆದ ಭೋಜನ ಕೂಟದಲ್ಲಿ ಸಚಿವ ಮಹದೇವಪ್ಪ, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್, ಸಲೀಂ ಅಹ್ಮದ್ ಹಾಗೂ ಮುಖಂಡ ಹಂಪನಗೌಡ ಬಾದರ್ಲಿ ಪಾಲ್ಗೊಂಡಿದ್ದರು. ರಾಜ್ಯದಲ್ಲಿನ ಸಿಎಂ ಬದಲಾವಣೆ ಚರ್ಚೆ, ಸಚಿವ ಸಂಪುಟ ಪುನಾರಚನೆ ಹಾಗೂ ಅಹಿಂದ ವರ್ಗದ ನಾಯಕರ ಸ್ಥಾನಮಾನಗಳ ಕುರಿತು ಈ ಸಭೆಯಲ್ಲಿ ಸುದೀರ್ಘ ಸಮಾಲೋಚನೆ ನಡೆಸಲಾಗಿದೆ. ಮುಂಬರುವ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಬಗ್ಗೆಯೂ ನಾಯಕರು ಚರ್ಚಿಸಿದ್ದಾರೆ ಎನ್ನಲಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.