2026-09-13 01:20:06

Minor girl raped | ರಾಜ್ಯದಲ್ಲಿ ಹೀನ ಕೃತ್ಯ ದೇವರ ದರ್ಶನಕ್ಕೆಂದು ಕರೆದೋಯ್ದು ಅಪ್ರಾಪ್ತೆ ಮೇಲೆ ಅತ್ಯಾಚಾರ ಮಹಿಳೆ ಸೇರಿ ಮೂವರು ಅರೆಸ್ಟ್! | SNK

Minor girl raped | ರಾಜ್ಯದಲ್ಲಿ ಹೀನ ಕೃತ್ಯ ದೇವರ ದರ್ಶನಕ್ಕೆಂದು ಕರೆದೋಯ್ದು ಅಪ್ರಾಪ್ತೆ ಮೇಲೆ ಅತ್ಯಾಚಾರ ಮಹಿಳೆ ಸೇರಿ ಮೂವರು ಅರೆಸ್ಟ್! | SNK

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ ನಡೆದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಮದ್ಯಪಾನ ಮಾಡಿಸಿ, ರಾತ್ರಿಯಿಡೀ ಆಕೆಯ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದೇವರ ದರ್ಶನಕ್ಕೆಂದು ಕರೆದುಕೊಂಡು ಹೋಗಿ ಈ ಭೀಕರ ಕೃತ್ಯ ಎಸಗಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ಎಸಗಿದ ಇಬ್ಬರು ಪುರುಷರು ಹಾಗೂ ಇದಕ್ಕೆ ಸಹಕರಿಸಿದ ಒಬ್ಬ ಮಹಿಳೆ ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜುಲೈ 17ರ ರಾತ್ರಿ ಮಹಿಳೆಯೊಬ್ಬಳು ದೇವಸ್ಥಾನಕ್ಕೆ ಹೋಗೋಣ ಎಂದು ಬಾಲಕಿಯನ್ನು ನಂಬಿಸಿ ಕರೆದುಕೊಂಡು ಬಂದಿದ್ದಳು. ಆ ಬಳಿಕ ಆಟೋದಲ್ಲಿ ಬಂದ ಇಬ್ಬರು ಆರೋಪಿಗಳು ಅಪ್ರಾಪ್ತೆಯನ್ನು ಬೇರೆಡೆಗೆ ಕರೆದೊಯ್ದಿದ್ದಾರೆ. ಅಲ್ಲಿ ಬಾಲಕಿಗೆ ಬಲವಂತವಾಗಿ ಮದ್ಯ ಕುಡಿಸಿ, ತೀವ್ರವಾಗಿ ಹಲ್ಲೆ ನಡೆಸಿದ ಆರೋಪಿಗಳು, ಬಳಿಕ ನಿರ್ಮಾಣ ಹಂತದ ಕಟ್ಟಡವೊಂದಕ್ಕೆ ಆಕೆಯನ್ನು ಕರೆದೊಯ್ದು ರಾತ್ರಿ ಪೂರ್ತಿ ಅತ್ಯಾಚಾರ ಎಸಗಿದ್ದಾರೆ. ಬೆಳಗಾಗುತ್ತಿದ್ದಂತೆ ಬಾಲಕಿಯನ್ನು ಮನೆ ಬಳಿ ಬಿಟ್ಟು, ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಪರಾರಿಯಾಗಿದ್ದರು.

ಮನೆಗೆ ಬಂದ ಮಗಳ ಸ್ಥಿತಿಯನ್ನು ಕಂಡು ಅನುಮಾನಗೊಂಡ ತಾಯಿ ಪ್ರಶ್ನಿಸಿದಾಗ ರಾತ್ರಿ ನಡೆದ ಭೀಕರ ಕೃತ್ಯ ಹೊರಬಿದ್ದಿದೆ. ತಕ್ಷಣವೇ ಜಾಗರೂಕರಾದ ಪೋಷಕರು ಬಾಲಕಿಯೊಂದಿಗೆ ದೇವನಹಳ್ಳಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತಕ್ಷಣವೇ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಕೃತ್ಯ ಎಸಗಿದ ಇಬ್ಬರು ಹಾಗೂ ನೆರವಾದ ಮಹಿಳೆಯನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.