2026-04-23 10:39:51

Minority Development Corporation interest waiver | CT Ravi | ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಬಡ್ಡಿ ಮನ್ನಾ: ಒಂದು ಕೋಮಿನ ಓಲೈಕೆ ಏಕೆ ? | SNK

Minority Development Corporation interest waiver | CT Ravi | ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಬಡ್ಡಿ ಮನ್ನಾ: ಒಂದು ಕೋಮಿನ ಓಲೈಕೆ ಏಕೆ ? | SNK

ಬೆಂಗಳೂರು: ಮಾನ್ಯ ಮುಖ್ಯಮಂತ್ರಿಗಳೇ, ಎಲ್ಲ ನಿಗಮಗಳಲ್ಲಿ ಸಾಲ ಪಡೆದವರ ಬಡ್ಡಿ ಮನ್ನಾ ಮಾಡಿಲ್ಲವೇಕೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ. ಅವರು ಇಂದು ಬಿಜೆಪಿ ಕಾರ್ಯಾಲಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. 
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಾಲಗಳ ಬಡ್ಡಿ ಮನ್ನಾ ಮಾಡಿದ್ದೀರಿ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸಾಲದ ಬಡ್ಡಿ ಮನ್ನಾ ಯಾಕೆ ಮಾಡಿಲ್ಲ ಎಂದು ಕೇಳಿದರು. ವಾಲ್ಮೀಕಿ ನಿಗಮದ ಬಡ್ಡಿ ಮನ್ನಾ ಯಾಕೆ ಮಾಡಿಲ್ಲ? ಇತರ ಹಿಂದುಳಿದ ವರ್ಗಗಳ ನಿಗಮದಲ್ಲಿ ಕೊಟ್ಟ ಸಾಲದ ಬಡ್ಡಿ ಯಾಕೆ ಮನ್ನಾ ಮಾಡಿಲ್ಲ ಎಂಬ ಪ್ರಶ್ನೆಯನ್ನು ಮುಂದಿಟ್ಟರು.
ಕೇವಲ ಒಂದು ಕೋಮನ್ನು ಓಲೈಸುವುದು ನಿಮ್ಮ ಜಾತ್ಯತೀತತೆಯೇ? ಉಳಿದ ನಿಗಮಗಳಲ್ಲೂ ಬಡ್ಡಿ ಮನ್ನಾ ಮಾಡಿದ್ದರೆ ಅದು ಒಪ್ಪುವ ಮಾತಾಗುತ್ತಿತ್ತು. ನಿಮ್ಮದು ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ, ಅದೇ ಹಳೇ ಕಥೆ; ಇದನ್ನೇ ಮತ್ತೆ ಮುಂದುವರೆಸಿದ್ದೀರಿ ಎಂದು ಆಕ್ಷೇಪಿಸಿದರು.
ಜಿಬಿಎಯ 5 ಮಹಾನಗರ ಪಾಲಿಕೆಗಳನ್ನೂ ನಾವು ಗೆಲ್ಲಲಿದ್ದೇವೆ. ಅದನ್ನು ಗೆಲ್ಲಲು ಬೇಕಾದ ಎಲ್ಲ ವಾತಾವರಣ ಇದೆ. ಕಾಂಗ್ರೆಸ್ ವಿರುದ್ಧ ಜನಾಕ್ರೋಶ ಇದೆ. ಬೆಂಗಳೂರಿನ ಜನರು ಬೇಸತ್ತಿದ್ದಾರೆ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು.ಸೋಮವಾರದಿಂದ ಪ್ರಾರಂಭಿಸಲು ಪ್ರಸ್ತಾಪಿಸಲಾದ ರಾಜ್ಯ ಸರ್ಕಾರದ ಅನ್ಯಾಯದ ಬೆಂಗಳೂರು ಮೆಟ್ರೋ ದರ ಏರಿಕೆಯ ವಿರುದ್ಧ ತಕ್ಷಣದ ಮಧ್ಯಪ್ರವೇಶವನ್ನು ಕೋರಿದ್ದೇನೆ. ಬೆಂಗಳೂರಿನಲ್ಲಿ ಈಗಾಗಲೇ ಭಾರತದಲ್ಲಿ ಅತ್ಯಂತ ದುಬಾರಿ ಮೆಟ್ರೋ ದರಗಳಿವೆ ಎಂದು ನಾನು ಗಮನಸೆಳೆದಿದ್ದೇನೆ. ಮತ್ತೊಂದು ಹೆಚ್ಚಳವು ಲಕ್ಷಾಂತರ ನಾಗರಿಕರಿಗೆ ಸಾರ್ವಜನಿಕ ಸಾರಿಗೆಯನ್ನು ತಲುಪಲು ಕಷ್ಟವಾಗುತ್ತದೆ ಮತ್ತು ಅದರ ಉದ್ದೇಶವನ್ನು ವಿಫಲಗೊಳಿಸುತ್ತದೆ.
ಪ್ರಸ್ತಾವಿತ ಹೆಚ್ಚಳವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಕೇಂದ್ರ ಸಚಿವರು ಸೂಚನೆ ನೀಡಿದ್ದಾರೆ. ಈ ಪ್ರಯಾಣ ದರ ಏರಿಕೆ ಸೋಮವಾರದಿಂದ ಜಾರಿಗೆ ಬರುವುದಿಲ್ಲ. FFC ಯಲ್ಲಿನ ವೈಪರೀತ್ಯಗಳ ವೈಯಕ್ತಿಕ ಪರಿಶೀಲನೆಯನ್ನು ಸಹ ಅವರು ಭರವಸೆ ನೀಡಿದ್ದಾರೆ ಮತ್ತು ರಾಜ್ಯ ಅದನ್ನು ಕೋರಿದರೆ ಹೊಸ ಸಮಿತಿಯನ್ನು ಪರಿಗಣಿಸಬಹುದು ಎಂದು ಹೇಳಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.