ಯಾದಗಿರಿ: ಅಪ್ರಾಪ್ತೆಯ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಮಲ್ಲಿಕಾರ್ಜುನ ಮುತ್ಯಾ ಮೇಲೆ ಪ್ರಕರಣ ದಾಖಲಾಗಿದೆ. ಒಂದು ಕಡೆ ಮುತ್ಯಾ ಅಜ್ಞಾತ ಸ್ಥಳಕ್ಕೆ ತೆರಳಿದ್ದರೆ ಇತ್ತ ಅಪ್ರಾಪ್ತೆಯ ಪೋಷಕರು ಮುತ್ಯಾ ಬೆಂಬಲಕ್ಕೆ ನಿಂತಿದ್ದಾರೆ.
ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ವಿಚಾರವಾಗಿ ಅಪ್ರಾಪ್ತ ಬಾಲಕಿ ಪೋಷಕರಿಂದ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಪೋಷಕರು ಮಹಾರಾಷ್ಟ್ರದ ಸೊಲ್ಲಾಪುರದಿಂದ ಹೇಳಿಕೆ ನೀಡಿದ್ದಾರೆ.
ವಿಡಿಯೋದಲ್ಲಿ ಮಾತನಾಡಿರುವ ಪೋಷಕರು, ನಮ್ಮ ಮಗಳು ಅಪ್ಪಾವ್ರ (ಮುತ್ಯಾ) ಜೊತೆಗೆ ಇರುವ ವಿಡಿಯೋ ವೈರಲ್ ಆಗಿದೆ. ವಿಡಿಯೋ ತಿರುಚಿ ಕಿಡಿಗೇಡಿಗಳು ವೈರಲ್ ಮಾಡಿದ್ದಾರೆ. ಈ ವಿಷಯದಲಿ ಮಲ್ಲಿಕಾರ್ಜುನ ಮುತ್ಯಾ ಅವರದ್ದು ಏನೂ ತಪ್ಪಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬಾಲಕಿ ಹುಟ್ಟುಹಬ್ಬ ಇದ್ದಿದ್ದರಿಂದ ನಾವು ಅಪ್ಪಾಜಿ ಮಠಕ್ಕೆ ಹೋಗಿದ್ದೆವು. ನಾವು ಮಲ್ಲಿಕಾರ್ಜುನ ಮುತ್ಯಾ ಅವರ ಭಕ್ತರಾಗಿದ್ದೇವೆ. ಕಳೆದ ಮೂರ್ನಾಲ್ಕು ವರ್ಷದಿಂದ ಮಲ್ಲಿಕಾರ್ಜುನ ಅವರ ದರ್ಶನ ಮತ್ತು ಆಶೀರ್ವಾದ ಪಡೆಯಲು ಹೋಗುತ್ತೇವೆ ಎಂದಿದ್ದಾರೆ.
ನಮ್ಮ ಮಗಳಿಗೆ ಮಲ್ಲಿಕಾರ್ಜುನ ಮುತ್ಯಾ ಅವರು ಆಶೀರ್ವಾದ ಕೊಟ್ಟರು. ಅಪ್ಪಾ ಅವರು ಆಶೀರ್ವಾದ ಕೊಡ್ತಿದ್ದಾರಂತ ನಾವು ಖುಷಿಯಾಗಿ ವಿಡಿಯೋ ಮಾಡಿದ್ದೇವೆ. ನಾವು ಸ್ಟೇಟಸ್ ಹಾಗೂ ಸೋಶಿಯಲ್ ಮೀಡಿಯಾದಲ್ಲಿ ಆಶೀರ್ವಾದ ಅಂತ ಹಾಕಿದ್ದೇವೆ ಎಂದು ಹೇಳಿದ್ದಾರೆ.
ನಮ್ಮ ಮಗಳು ಮಲ್ಲಿಕಾರ್ಜುನ ಮುತ್ಯಾ ಅವರ ಜೊತೆಗೆ ಇರುವ ವಿಡಿಯೋ ವೈರಲ್ ಆಗಿದೆ. ವಿಡಿಯೋ ತಿರುಚಿ ಕಿಡಿಗೇಡಿಗಳು ವೈರಲ್ ಮಾಡಿದ್ದಾರೆ. ಪೊಲೀಸ್ ಇಲಾಖೆ ಸೇರಿ ಎಲ್ಲಿ ಕರೆದರೂ ನಾವು ಹೋಗುತ್ತೇವೆ. ಅಪ್ಪಾವ್ರದ್ದೂ ಏನೂ ತಪ್ಪಿಲ್ಲ ಅವರು ದೇವರ ಸಮಾನ . ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ತಿರುಚಿದವರ ಮೇಲೆ ಕ್ರಮ ಆಗಬೇಕು ಎಂದು ಆಪ್ರಾಪ್ತ ಬಾಲಕಿಯ ಪೋಷಕರು ಒತ್ತಾಯಿಸಿದ್ದಾರೆ.