2026-06-08 01:28:59

MLA Dr Ranganath | ರೈತರನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ ಭತ್ಯೆ ನೀಡಲು ಶಾಸಕ ಡಾ ರಂಗನಾಥ್‌ ಮನವಿ | Speed News Kannada

MLA Dr Ranganath  | ರೈತರನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ ಭತ್ಯೆ ನೀಡಲು ಶಾಸಕ ಡಾ ರಂಗನಾಥ್‌ ಮನವಿ | Speed News Kannada

ಬೆಂಗಳೂರು: ಹಳ್ಳಿಗಳಲ್ಲಿ ವಾಸವಿದ್ದು, ವ್ಯವಸಾಯ ಮಾಡಿಕೊಂಡಿರುವ ಗಂಡು ಮಕ್ಕಳನ್ನು ಮದುವೆ ಆಗುವ ಹೆಣ್ಣು ಮಕ್ಕಳಿಗೆ ಮುಂಬರುವ ಅಧಿವೇಶನದಲ್ಲಿ ವಿಶೇಷ ಭತ್ಯೆ ಹಾಗೂ ಅವರಿಗೆ ವಿಶೇಷ ಸ್ಥಾನಮಾನವನ್ನು ಘೋಷಿಸಬೇಕು ಎಂದು ಕುಣಿಗಲ್‌ ಶಾಸಕ ಡಾ.ಎಚ್.ಡಿ. ರಂಗನಾಥ್‌ ಸರ್ಕಾರವನ್ನು ಆಗ್ರಹಪಡಿಸಿದ್ದಾರೆ.
ಈ ಸಂಬಂಧ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ನನ್ನ ಮತಕ್ಷೇತ್ರ ಕುಣಿಗಲ್ ತಾಲ್ಲೂಕು ಗ್ರಾಮೀಣ ಪ್ರದೇಶವಾಗಿದ್ದು, ವ್ಯವಸಾಯ ಅವಲಂಬನೆ ಹೆಚ್ಚಿರುತ್ತದೆ ಹಾಗೂ ಗ್ರಾಮಗಳಲ್ಲಿ ಹೆಚ್ಚಿನ ಯುವಕರು ವಾಸವಿದ್ದು, ವ್ಯವಸಾಯ ಮಾಡಿಕೊಂಡು ಜೀವನ ಮಾಡುತ್ತಿದ್ದಾರೆ. ಆದರೆ ಇವರನ್ನು ಮದುವೆ ಆಗಲು ಹೆಣ್ಣು ಮಕ್ಕಳು ನಿರಾಕರಿಸುತ್ತಿದ್ದು, ಮೂವತ್ತು ವರ್ಷ ದಾಟಿದರೂ ಮದುವೆ ಆಗದೆ, ತೊಂದರೆಯಲ್ಲಿರುತ್ತಾರೆ. ಆದ್ದರಿಂದ ವಿಶೇಷ ಭತ್ಯೆ ಹಾಗೂ ಸ್ಥಾನಮಾನ ನೀಡಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಬಜೆಟ್‌ ತಯಾರಿ ಸಂದರ್ಭದಲ್ಲಿ ರೈತಸಂಘಟನೆಗಳ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿದ್ದರು. ಆಗಲೂ ರೈತ ಮುಖಂಡರು ರೈತರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ 10 ಲಕ್ಷ ರೂ. ಠೇವಣಿ ಇಡಬೇಕು ಎಂದು ಆಗ್ರಹಪಡಿಸಿದ್ದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.