2026-06-25 04:14:45

Mobile phone stolen while wearing RCB jersey|ಆರ್‌ಸಿಬಿ ಜೆರ್ಸಿ ಧರಿಸಿ ಮೊಬೈಲ್ ಕಳ್ಳತನ|Speed News Kannada

Mobile phone stolen while wearing RCB jersey|ಆರ್‌ಸಿಬಿ ಜೆರ್ಸಿ ಧರಿಸಿ ಮೊಬೈಲ್ ಕಳ್ಳತನ|Speed News Kannada

ಐಪಿಎಲ್ ಪಂದ್ಯಗಳ ವೇಳೆ ಕ್ರಿಕೆಟ್ ಅಭಿಮಾನಿಗಳ ಸಂಭ್ರಮವನ್ನೇ ದುರುಪಯೋಗಪಡಿಸಿಕೊಂಡಿದ್ದ ಅಂತರರಾಜ್ಯ ಮೊಬೈಲ್ ಕಳ್ಳರ ಜಾಲವನ್ನು ಕಬ್ಬನ್ ಪಾರ್ಕ್ ಪೊಲೀಸರು ಪತ್ತೆಹಚ್ಚಿದ್ದಾರೆ. ಆರ್‌ಸಿಬಿ ಹಾಗೂ ಎಸ್‌ಆರ್‌ಎಚ್ ಪಂದ್ಯದ ವೇಳೆ ನಡೆದಿದ್ದ ಮೊಬೈಲ್ ಕಳ್ಳತನ ಪ್ರಕರಣದಲ್ಲಿ ಮಹತ್ವದ ಯಶಸ್ಸು ಪೊಲೀಸರಿಗೆ ಲಭಿಸಿದೆ.ಈ ಪ್ರಕರಣದಲ್ಲಿ ಒಟ್ಟು 19 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಇವರಲ್ಲಿ 18 ಮಂದಿ ಅಪ್ರಾಪ್ತರು ಸೇರಿದ್ದಾರೆ. ಪ್ರಮುಖ ಆರೋಪಿಯಾಗಿರುವ ಶುಭಮ್ ಎಂಬಾತನನ್ನು ಬಂಧಿಸಲಾಗಿದೆ. ಉಳಿದ ಅಪ್ರಾಪ್ತರನ್ನು ಬಳಸಿಕೊಂಡು ಕಳ್ಳತನ ನಡೆಸಲಾಗುತ್ತಿತ್ತು ಎಂಬುದು ತನಿಖೆಯಿಂದ ತಿಳಿದುಬಂದಿದೆ.

ಜಾರ್ಖಂಡ್ ಮೂಲದ ಈ ತಂಡ, ಆರ್‌ಸಿಬಿ ತಂಡದ ಟೀ ಶರ್ಟ್ ಧರಿಸಿ ಅಭಿಮಾನಿಗಳಂತೆ ಕ್ರೀಡಾಂಗಣ ಪ್ರವೇಶಿಸುತ್ತಿತ್ತು. ಜನಜಂಗುಳಿಯ ನಡುವೆ ಅವಕಾಶ ಪಡೆದು ಮೊಬೈಲ್‌ಗಳನ್ನು ಕಳವು ಮಾಡುತ್ತಿತ್ತು.ಈ ಕಾರ್ಯಾಚರಣೆಯಲ್ಲಿ ಪೊಲೀಸರು 51 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ಮುಂದುವರಿದಿದೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.