2026-06-08 01:28:17

Modi Ganga Expressway inaugurated in UP|ಯುಪಿಯಲ್ಲಿ ಮೋದಿ ಗಂಗಾ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ|Speed News Kannada

Modi Ganga Expressway inaugurated in UP|ಯುಪಿಯಲ್ಲಿ ಮೋದಿ  ಗಂಗಾ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ|Speed News Kannada

ಉತ್ತರ ಪ್ರದೇಶದ ಸಾರಿಗೆ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆ ತರಲು ಉದ್ದೇಶಿಸಲಾದ 594 ಕಿ.ಮೀ ಉದ್ದದ ಬೃಹತ್ 'ಗಂಗಾ ಎಕ್ಸ್‌ಪ್ರೆಸ್‌ವೇ'ಯನ್ನು ಪ್ರಧಾನಿ ನರೇಂದ್ರ ಮೋದಿ ಅವರ ಇಂದು ಉದ್ಘಾಟಿಸಿದರು. ಈ ಯೋಜನೆಯು ಪಶ್ಚಿಮ ಮತ್ತು ಪೂರ್ವ ಉತ್ತರ ಪ್ರದೇಶವನ್ನು ಬೆಸೆಯುವ ಮೂಲಕ ಅಭಿವೃದ್ಧಿಯ ಹೊಸ ಹಾದಿಯನ್ನು ತೆರೆದಿದೆ. ಈ ಎಕ್ಸ್‌ಪ್ರೆಸ್‌ವೇಯಿಂದಾಗಿ ಮೀರತ್‌ನಿಂದ ಪ್ರಯಾಗ್‌ರಾಜ್‌ವರೆಗಿನ ಪ್ರಯಾಣದ ಸಮಯ 10-12 ಗಂಟೆಗಳಿಂದ ಕೇವಲ 6 ಗಂಟೆಗೆ ಇಳಿಕೆಯಾಗಲಿದೆ.

ಸುಮಾರು ₹36,230 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಈ ಯೋಜನೆ ಉತ್ತರ ಪ್ರದೇಶದ ಆರ್ಥಿಕತೆಗೆ 'ಜೀವನಾಡಿ'ಯಾಗಲಿದೆ ಎಂದು ಪ್ರಧಾನಿ ಬಣ್ಣಿಸಿದರು.ಗಂಗಾ ಮಾತೆಯ ಹೆಸರನ್ನು ಈ ಯೋಜನೆಗೆ ಇಟ್ಟಿರುವುದು ನಮ್ಮ ಅಭಿವೃದ್ಧಿ ಮತ್ತು ಪರಂಪರೆಯ ಸಮ್ಮಿಲನವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದರು.ಈ ಎಕ್ಸ್‌ಪ್ರೆಸ್‌ವೇ ಮೂಲಕ ಇನ್ನು ಮುಂದೆ ಪ್ರಯಾಣಿಕರು ಕೆಲವೇ ಗಂಟೆಗಳಲ್ಲಿ ಪ್ರಯಾಗ್‌ರಾಜ್‌ನ ಸಂಗಮ ಹಾಗೂ ಕಾಶಿ ವಿಶ್ವನಾಥನ ದರ್ಶನ ಪಡೆದು ಮರಳಬಹುದಾಗಿದೆ. ಈ ಯೋಜನೆಯು ರಾಜ್ಯದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಮೈಲಿಗಲ್ಲಾಗಲಿದೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.