2026-07-23 09:20:16

Modi roar in Bengal election arena|ಬಂಗಾಳ ಚುನಾವಣಾ ಅಖಾಡದಲ್ಲಿ ಮೋದಿ ಅಬ್ಬರ|Speed News Kannada

Modi roar in Bengal election arena|ಬಂಗಾಳ ಚುನಾವಣಾ ಅಖಾಡದಲ್ಲಿ ಮೋದಿ ಅಬ್ಬರ|Speed News Kannada

ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ.ಹಲ್ದಿಯಾದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಗೆದ್ದರೆ ಜನತೆಗೆ ಆರು ಗ್ಯಾರಂಟಿಗಳನ್ನು ನೀಡುವುದಾಗಿ ಭರವಸೆ ನೀಡಿದರು.ಈ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ದುರುಳಿತ ಹೆಚ್ಚಾಗಿದೆ ಎಂದು ಆರೋಪಿಸಿದರು.

ಟಿಎಂಸಿ ಆಡಳಿತದಲ್ಲಿ ನಡೆದ ಭ್ರಷ್ಟಾಚಾರ ಮತ್ತು ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳನ್ನು ಮರುತೆರೆಯಲಾಗುವುದು ಮತ್ತು ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸಲಾಗುವುದು ಎಂದು ಹೇಳಿದರು.ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದರೆ 7ನೇ ವೇತನ ಆಯೋಗ ಜಾರಿಗೆ ತರುವುದಾಗಿ, ಸರ್ಕಾರಿ ನೌಕರರು ಹಾಗೂ ಶಿಕ್ಷಕರಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.ಅಕ್ರಮ ನುಸುಳುಕೋರರನ್ನು ದೇಶದಿಂದ ಹೊರಹಾಕಲಾಗುವುದು ಹಾಗೂ ನಿಜವಾದ ನಾಗರಿಕರಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಪ್ರಧಾನಿ ಭರವಸೆ ನೀಡಿದರು.

ಟಿಎಂಸಿ ಸರ್ಕಾರ ಯುವಕರ ಭವಿಷ್ಯ ಹಾಳು ಮಾಡಿದ್ದು, ಉದ್ಯೋಗಾವಕಾಶಗಳನ್ನು ಕುಂಠಿತಗೊಳಿಸಿದೆ ಎಂದು ಆರೋಪಿಸಿದ ಮೋದಿ, ಬದಲಾವಣೆಗೆ ಜನ ಸಿದ್ಧರಾಗಿದ್ದಾರೆ ಎಂದು ಹೇಳಿದರು.ಈ ಬಾರಿ ಚುನಾವಣೆಯಲ್ಲಿ ಟಿಎಂಸಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವಂತೆ ಮತದಾರರಿಗೆ ಮನವಿ ಮಾಡಿದರು.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.